
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ 6: ನಗರದಲ್ಲಿನ ಕಂಟೋನ್ಮೆಂಟ್ ಪ್ರದೇಶದ ರೈಲ್ವೆ ಗೇಟ್ ಬಳಿ ಬೇಸಿಗೆ ತಾಪಮಾನ ತೀವ್ರವಾಗಿರುವ ಹಿನ್ನೆಲೆಯಲ್ಲಿ ಪ್ರತಿದಿನ ನೂರಾರು ವಾಹನ ಸವಾರರು ಉರಿ ಬಿಸಿಲಿನಲ್ಲಿ ನಿಂತುಕೊಳ್ಳಬೇಕಾಗುತ್ತಿರುವುದು ಗಮನಿಸಿ. ಈ ಸಮಸ್ಯೆಯನ್ನು ಅರಿತ ಮಾಜಿ ಮಹಾಪೌರರು ಹಾಗೂ ಪಾಲಿಕೆ ಸದಸ್ಯೆ ಎಂ. ರಾಜೇಶ್ವರಿ ಸುಬ್ಬರಾಯುಡು ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ಅವರ ಮನವಿಗೆ ಸ್ಪಂದಿಸಿದ ಅಧಿಕಾರಿಗಳು ತುರ್ತಾಗಿ ಗ್ರೀನ್ ಮ್ಯಾಟ್ ಅಳವಡಿಕೆ ಕಾರ್ಯ ಕೈಗೊಂಡು ಪೂರ್ಣಗೊಳಿಸಿದ್ದು. ಇದರಿಂದ ವಾಹನ ಸವಾರರಿಗೆ ನೆರಳಿನ ವ್ಯವಸ್ಥೆಯಾಗಿದೆ. ಇದನ್ನು ರಾಜೇಶ್ವರಿ ಅವರು ಇಂದು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಯೋಗಾನಂದ ರೆಡ್ಡಿ, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
























