
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ.28: ಕಟ್ಟಡ ಮತ್ತು ಇತರೆ ನಿರ್ಮಾಣ ಹಾಗೂ ಅಸಂಘಟಿತರಾಗಿ ದುಡಿಯುವ ಕಾರ್ಮಿಕರಿಗೆ ನಿವೇಶನ ಮತ್ತು ಮನೆ ನೀಡುವಂತೆ ಆಗ್ರಹಿಸಿ ಇಂದು ಮೇಯರ್ ಮುಲ್ಲಂಗಿ ನಂದೀಶ್ ಅವರಿಗೆ ಮನೆ ಸಲ್ಲಿಸಲಾಗಿದೆ.
ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘವು ಮನವಿ ಸಲ್ಲಿಸಿ ಕಟ್ಟಡ ನಿರ್ಮಾಣ ಹಾಗೂ ಅಸಂಘಟಿತ ಕಾರ್ಮಿಕರ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನಮಗೆ ಇಲ್ಲಿ ತನಕ ಸ್ವಂತ ಜಾಗ ಮನೆ ಇಲ್ಲ. ಕಳೆದ 20 ವರ್ಷ ಮೇಲ್ಪಟ್ಟು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಸತಿ ಯೋಜನೆ ಅಡಿಯಲ್ಲಿ ಅಥವಾ ಕಾರ್ಮಿಕ ಇಲಾಖೆಯಿಂದ ವಸತಿ ಸೌಲಭ್ಯ ನೀಡಬೇಕು ಎಂದು ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಎಂ. ಮಲ್ಲೇಶ್ ಮನವಿ ಮಾಡಿದ್ದಾರೆ.
