ಕನ್ನಡದ ಬೆಳವಣಿಗೆಯಲ್ಲಿ ಕಸಾಪದ ಮಹತ್ವದ ಪಾತ್ರ: ಕೆ.ಎಂ.ಮುಸ್ತಫಾ

ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ-೨೦೨೫ ಸಮಾರೋಪ ಮತ್ತು ಸನ್ಮಾನ
ಸುಳ್ಯ:ಸುಳ್ಯ ಕಸಾಪ ಘಟಕ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕನ್ನಡದ ಬೆಳವಣಿಗೆಗೆ ಶ್ರಮಿಸುತಿದೆ. ಕನ್ನಡ ನಾಡು ನುಡಿಯ ಬೆಳವಣಿಗೆಯಲ್ಲಿ ಕಸಾಪದ ಪಾತ್ರ ಮಹತ್ವದಾಗಿದೆ ಎಂದು ಸುಳ್ಯ ನಗರ ಯೋಜನಾ ಪ್ರಾದಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟಸ ಸಹಯೋಗದಲ್ಲಿ ದುಗ್ಗಲಡ್ಕದ ಅಯ್ಯಪ್ಪ ಭಜನಾ ಭಜನಾ ಮಂದಿರದ ಸಭಾಭವನದಲ್ಲಿ ಶುಕ್ರವಾರ ನಡೆದ ಸಾಹಿತ್ಯ ಸಂಭ್ರಮ -೨೦೨೫ ಇದರ ಸಮಾರೋಪ ಸಮಾರಂಭ- ಸನ್ಮಾನ , ಗಾನ ವೈಭವ ಕಾರ್ಯಕ್ರಮದಲ್ಲಿ ಸಮಾರೋಪ ಭಾಷಣ ಮಾಡಿದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಅರೆಭಾಷೆ ಅಕಾಡೆಮಿಯ ಪೂರ್ವಾಧ್ಯಕ್ಷ ಪಿ.ಸಿ.ಜಯರಾಮ, ಚಿಂತನಾ ಸುಬ್ರಹ್ಮಣ್ಯ ಮಾಣಿಬೆಟ್ಟು, ದುಗ್ಗಲಡ್ಕ ಪ್ರೌಢಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷೆ ಶೀಲಾವತಿ ಮಾಧವ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾದಂಬರಿಕಾರ್ತಿ ಉದಯಕುಮಾರಿ ಬಿರ್ಮುಕಜೆ, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಡಾ.ಚಂದ್ರಶೇಖರ ದಾಮ್ಲೆ, ಶಿಕ್ಷಣ ಕ್ಷೇತ್ರದಲ್ಲಿ ಚಂದ್ರಶೇಖರ ಗೌಡ ಮೋಂಟಡ್ಕ ಅವರನ್ನು ಸನ್ಮಾನಿಸಲಾಯಿತು. ಚಂದ್ರಾವತಿ ಬಡ್ಡಡ್ಕ ಸನ್ಮಾನಿತರ ಸನ್ಮಾನ ಪತ್ರ ವಾಚಿಸಿದರು. ಸನ್ಮಾನಿತರ ಪರವಾಗಿ ಡಾ.ಚಂದ್ರಶೇಖರ ದಾಮ್ಲೆ ಮಾತನಾಡಿದರು.
ವೇದಿಕೆಯಲ್ಲಿ ಕಾರ್ಯಕ್ರಮದ ಸಂಯೋಜಕ ಕೆ.ಟಿ.ವಿಶ್ವನಾಥ, ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಸುಳ್ಯ ಕಸಾಪದ ಗೌರವ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ , ಚಂದ್ರಮತಿ ಕೆ., ಕೋಶಾಧಿಕಾರಿ ದಯಾನಂದ ಆಳ್ವ, ಕಸಾಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಯುವಕ ಮಂಡಲದ ಅಧ್ಯಕ್ಷ ತೀರ್ಥರಾಮ ಕೊಯಿಕುಳಿ ಉಪಸ್ಥಿತರಿದ್ದರು.
ನವ್ಯ ದಿನೇಶ್ ಕೊಯಿಕುಳಿ ಮತ್ತು ಬಳಗದವರು ಆಶಯ ಗೀತೆ ಹಾಡಿದರು. ಕೆ.ಟಿ.ವಿಶ್ವನಾಥ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ತೇಜಸ್ವಿ ಕಡಪಳ ವಂದಿಸಿದರು. ಕಸಾಪ ನಿರ್ದೇಶಕ ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ ಯಕ್ಷಗಾನ ಗಾನ ವೈಭವ ಕಾರ್ಯಕ್ರಮ ನಡೆಯಿತು.