Home ಜಿಲ್ಲೆ ಕನ್ನಡಿಗರ ರಕ್ಷಣಾ ವೇದಿಕೆ ಬೀದರ ಜಿಲ್ಲಾ ಪದಾಧಿಕಾರಿಗಳ ನೇಮಕ

ಕನ್ನಡಿಗರ ರಕ್ಷಣಾ ವೇದಿಕೆ ಬೀದರ ಜಿಲ್ಲಾ ಪದಾಧಿಕಾರಿಗಳ ನೇಮಕ

ಬೀದರ್:ಏ.೪:ಕನ್ನಡಿಗರ ರಕ್ಷಣಾ ವೇದಿಕೆ ಬೀದರ ಜಿಲ್ಲಾ ಘಟಕದ ಪದಾಧಿಕಾರಿಗಳ ನೇಮಕ ಕಾರ್ಯಕ್ರಮವು ನಗರದ ಚಿಟ್ಟಾ ಕ್ರಾಸ್‌ನಲ್ಲಿರುವ ಖಾಸಗಿ ಸಭಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ ನಡೆಯಿತು.
ಜಿಲ್ಲಾಧ್ಯಕ್ಷರಾದ ಶ್ರೀಕಾಂತ ಭವಾನಿ ಅವರ ಅಧ್ಯಕ್ಷತೆಯಲ್ಲಿ, ರಾಜ್ಯಾಧ್ಯಕ್ಷ ಕೆ.ಜಿ. ಕನ್ನಡ ಪ್ರಕಾಶ (ಬೆಂಗಳೂರು) ಅವರ ಆದೇಶದ ಮೇರೆಗೆ ಕಲ್ಯಾಣ ಕರ್ನಾಟಕ ವಿಭಾಗೀಯ ಹಾಗೂ ಬೀದರ ಜಿಲ್ಲಾ, ತಾಲ್ಲೂಕು ಮತ್ತು ನಗರ ಘಟಕಗಳಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ಆನಂದಕುಮಾರ ದೊಮಲ್ ಅವರನ್ನು ಕಲ್ಯಾಣ ಕರ್ನಾಟಕ ವಿಭಾಗೀಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಸಾಲೋಮನ್ ಅವರನ್ನು ಕಮಠಾಣ ಗ್ರಾಮದ ಘಟಕದ ಅಧ್ಯಕ್ಷರಾಗಿ, ಪ್ರ‍್ಯಾಂಕ್ಲಿನ್ ಅವರನ್ನು ತಾಲ್ಲೂಕು ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಜೊತೆಗೆ, ಯೋಹಾನ ಘಾಳೆನೋರ್ ಅವರನ್ನು ಬೀದರ ನಗರ ಯುವ ಘಟಕದ ಅಧ್ಯಕ್ಷರಾಗಿ ಹಾಗೂ ಜೈಕುಮಾರ ಬಿ ಅವರನ್ನು ಬೀದರ ದಕ್ಷಿಣ ಕ್ಷೇತ್ರದ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡಿಗರ ರಕ್ಷಣಾ ವೇದಿಕೆ ಸಾಂಸ್ಕೃತಿಕ ವಿಭಾಗದ ರಾಜ್ಯ ಉಪಾಧ್ಯಕ್ಷ ರಾಘವೇಂದ್ರ ಸೋರಳ್ಳಿಕರ್, ಸಂಘಟನೆಯನ್ನು ಬಲಪಡಿಸುವ ಮೂಲಕ ಕ್ಷೇತ್ರದ ಸಮಸ್ಯೆಗಳು ಮತ್ತು ಸವಾಲುಗಳನ್ನು ಎದುರಿಸಿ ಅಭಿವೃದ್ಧಿ ಸಾಧಿಸಬಹುದಾಗಿದೆ ಎಂದು ಹೇಳಿದರು. ಸಂಘಟನೆಯ ಮೂಲಕ ಜನಪ್ರತಿನಿಧಿಗಳಿಗೂ ಸರ್ಕಾರಕ್ಕೂ ಮನವಿ ಸಲ್ಲಿಸಿ ಹೋರಾಟ ನಡೆಸಿದಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣಕುಮಾರ ಭಾಗೀನೋರ್ ಹಾಗೂ ಯುವ ಘಟಕದ ಜಿಲ್ಲಾಧ್ಯಕ್ಷ ಸ್ಟಾಲಿನ್ ಮೇಟಿಗೆ ಸೇರಿದಂತೆ ಇತರರು ಉಪಸ್ಥಿತರಿದ್ದರು.