
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಅ.31: ನಗರದಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಉಕ್ಕಿನ ಮನುಷ್ಯರೆಂದೇ ಖ್ಯಾತಿಪಡೆದಿದ್ದ ಸರ್ದಾರ ವಲ್ಲಭಬಾಯಿ ಪಟೇಲರ 150 ನೇ ಜಯಂತಿ
ಮತ್ತು ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 41ನೇ ಪುಣ್ಯಸ್ಮರಣೆ ಕಾರ್ಯಕ್ರಮ ಜರುಗಿತು.
ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಪಕ್ಷದ ಪ್ರಮುಖ ಮುಖಂಡರು, ಪಟೇಲರು ಮತ್ತು ಇಂದಿರಾಗಾಂಧಿ ಅವರು ದೇಶಕ್ಕೆ ಮತ್ತು ಪಕ್ಷಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಈ ಸಂಧರ್ಭದಲ್ಲಿ ಪಕ್ಷದ ಮುಖಂಡರು ಇದ್ದರು.

































