ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ ಪುಣ್ಯಸ್ಮರಣೆ

ಸಂಜೆವಾಣಿ ನ್ಯೂಸ್
ಮೈಸೂರು, ಮೇ.22:-
ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ 34ನೇ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಐ.ಎನ್.ಟಿ.ಯು.ಸಿ ವಿಭಾಗದ ವಿಶೇಷ ಸಭೆಯನ್ನು ನಡೆಸಲಾಯಿತು.


ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಐಎನ್ ಟಿಯುಸಿ ರಾಜ್ಯ ಸಮಿತಿಯ ಅಧ್ಯಕ್ಷ ಲಕ್ಷ್ಮಿವೆಂಕಟೇಶ್ ಮಾತನಾಡಿ, ದೇಶದಲ್ಲಿ ಕೈಗಾರಿಕಾ ಕ್ರಾಂತಿಗೆ ಮುನ್ನುಡಿ ಬರೆದು, ದೇಶದ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗೆ ಕಾರ್ಮಿಕ ಕಾಯಿದೆಗಳಿಗೆ ತಿದ್ದುಪಡಿ ತಂದ ಹೆಗ್ಗಳಿಕೆ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ ಎಂದರು.


ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಲ್ಲಿ 12000 ಕೋಟಿ ಹಣ ಇದೆ. ಇದನ್ನು ನಮ್ಮ ಸರ್ಕಾರ ಸಮರ್ಥವಾಗಿ ಬಳಸುತ್ತಿದೆ. ನಮ್ಮ ಸಂಘಟನೆಯು ಕಾರ್ಮಿಕರ ಹಕ್ಕುಗಳ ಹೋರಾಟದ ಪರವಾಗಿ ರಚನೆಗೊಂಡಿದೆ. ಕಾರ್ಮಿಕ ವಿಭಾಗ ತುಂಬ ಗಟ್ಟಿಯಾಗಿ. ಕಾರ್ಮಿಕ ಇಲಾಖೆಯಿಂದ ಪ್ರತಿಯೊಂದು ಸವಲತ್ತುಗಳನ್ನು ಕೊಡುತ್ತಿದ್ದಾರೆ ಅದನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳುವ ಅರಿವನ್ನು ಕಾರ್ಮಿಕರಲ್ಲಿ ಮೂಡಿಸುವುದು ನಮ್ಮ ಆದ್ಯ ಕರ್ತವ್ಯ. ಸರ್ಕಾರ ಕಾರ್ಮಿಕ ಇಲಾಖೆಯು 3 ಕೋಟಿ 80 ಲಕ್ಷ ಕಾರ್ಮಿಕರನ್ನು ನೋಂದಣಿ ಮಾಡಿಕೊಂಡಿದ್ದು, ದೇಶದಲ್ಲೇ ಅತಿ ಹೆಚ್ಚು ಕಾರ್ಮಿಕರನ್ನು ನೋಂದಾಯಿಸಿಕೊಂಡ ಹೆಗ್ಗಳಿಕೆ ಕರ್ನಾಟಕಕ್ಕೆ ಸಲ್ಲುತ್ತದೆ ಎಂದು ಹೇಳಿದರು.


ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮಾತನಾಡಿ, ರಾಜೀವ್ ಗಾಂಧಿ ಅವರು ದೇಶಕ್ಕೆ ಹೊಸ ದೊರವಾಣಿಯ ಹೊಸ ತಂತ್ರಜ್ಞಾನವನ್ನು ಪರಿಚಯಿಸಿ ಸಂಪರ್ಕ ಕ್ರಾಂತಿಯನ್ನೇ ಹರಿ ಬಿಟ್ಟಂತಹ ಮಹಾನ್ ದೂರದೃಷ್ಟಿ ವಾದಿಯಾಗಿದ್ದಾರೆ. ತಮ್ಮ ದಿಟ್ಟ ಆಲೋಚನೆಗಳ ಮೂಲಕ ಭವಿಷ್ಯದ ಭಾರತವನ್ನು ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸಿದವರಲ್ಲಿ ರಾಜೀವ್ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಮೂರ್ತಿ, ಐಎನ್‍ಟಿಯುಸಿ ರಾಜ್ಯ ಸಮಿತಿ ಉಪಾಧ್ಯಕ್ಷ ನಾಗರಾಜ್, ಪುಟ್ಟಯ್ಯ, ನಗರ ಅಧ್ಯಕ್ಷ ಮದನ್, ಗ್ರಾಮಾಂತರ ಅಧ್ಯಕ್ಷ ಚೇತನ್ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಪ್ಪ, ಉಪಾಧ್ಯಕ್ಷ ಹೆಡತಲೆ ಮಂಜುನಾಥ್, ಪೆÇ್ರ.ಶಿವಕುಮಾರ್, ಹುಣಸೂರು ಬಸವಣ್ಣ, ಮೋದಮಣಿ, ಪುಷ್ಪಲತಾ ಚಿಕ್ಕಣ್ಣ, ಚಿಕ್ಕಣ್ಣ ಈಶ್ವರ್ ಚಕ್ಕಡಿ, ಎಂ. ಶಿವಪ್ರಸಾದ್, ತಲಕಾಡು ಮಂಜುನಾಥ್, ರಮೇಶ್, ಸುನಂತ್ ಕುಮಾರ್, ಶಾಮ್. ಯೋಗೇಶ್ ಇತರರು ಭಾಗವಹಿಸಿದ್ದರು.