(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ: ಕೇಂದ್ರ ಸರ್ಕಾರದ ಹಿಡಿತದಲ್ಲಿರುವ ಜಾರಿ ನಿರ್ದೇಶನಾಲಯ (ಇಡಿ)ಯನ್ನು ಬಹಳ ಜೆಪಿಯವರು
ಕಾಂಗ್ರೆಸ್ ಜನಪ್ರತಿನಿಗಳನ್ನು ಗುರಿಯಾಗಿರಿಸಿಕೊಂಡು, ಅದರಲ್ಲೂ ಸಂಸದರು, ಶಾಸಕರ ಮನೆ ಮೇಲೆ ದಾಳಿ ಮಾಡುತ್ತಿರುವುದು ಖಂಡನೀಯ ಎಂದು ದಲ್ಲಿತ ಸಂಘರ್ಷ ಸಮಿತಿಯ(ಡಿ.ಜಿ.ಸಾಗರ) ರಾಜ್ಯ ಸಮಿತಿ ಸಂಚಾಲಕ ಎ.ಮಾನಯ್ಯ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು.
ವಾಲ್ಮೀಕಿ ನಿಗಮದ ಹಣ ಲೋಕಸಭೆ ಚುನಾವಣೆಗೆ ಬಳಸಿದ ಆರೋಪದ ಮೇಲೆ ನಿನ್ನೆ ಕಾಂಗ್ರೆಸ್ ಸಂಸದ ಈ. ತುಕಾರಾಂ, ಮಾಜಿ ಸಚಿವ ಬಿ ನಾಗೇಂದ್ರ ಅವರ ಬೆಂಬಲಿಗ ಗೋವರ್ಧನ ರೆಡ್ಡಿ, ಕಂಪ್ಲಿ ಶಾಸಕ ಜೆ ಎನ್ ಗಣೇಶ್, ಕೂಡ್ಲಿಗಿ ಶಾಸಕ ಡಾ.ಎನ್. ಟಿ. ಶ್ರೀನಿವಾಸ ಹಾಗೂ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮನೆ ಮೇಲೆ ಇಡಿ ದಾಳಿ ನಡೆಸಿದ್ದು ಸಂಪೂರ್ಣ ರಾಜಕೀಯ ಪ್ರೇರಿತವಾದುದಾಗಿದೆ ಎಂದಿದ್ದಾರೆ.
ಬಿಜೆಪಿ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಇಂದಿನವರೆಗೂ ಸ್ವತಂತ್ರ ಸಂಸ್ಥೆಗಳಾದ ಐಟಿ, ಇಡಿ ಮತ್ತು ಸಿಬಿಐ ನಂತಹ ಸ್ವಯತ್ತ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರವು ತನ್ನ ರಾಜಕೀಯ ವಿರೋಧಿಗಳನ್ನು, ಕುಗ್ಗಿಸುವ ಸಲುವಾಗಿ ಸುಳ್ಳು ಆರೋಪ ಮಾಡಿ ಪ್ರಕರಣ ದಾಖಲಿಸುತ್ತಿದ್ದಾರೆ.
ಕಳೆದ 10 ವರ್ಷಗಳಲ್ಲಿ ಇಡಿ ವಿವಿಧ ರಾಜಕಾರಣಿಗಳು, ಸಂಸತ್ ಸದಸ್ಯರು ಮತ್ತು ಶಾಸಕರ ವಿರುದ್ಧ 193 ಪ್ರಕರಣಗಳನ್ನು ದಾಖಲಿಸಿದೆ ಆದರೆ ಕೇವಲ ಎರಡು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆ ವಿಧಿಸಲಾಗಿದೆ. ಹಾಗಾದರೆ ಈ ದಾಳಿಗಳ ಹಿಂದಿನ ಉದ್ದೇಶ ರಾಜಕೀಯ ವಿರೋಧಿಗಳನ್ನು ಮುಗಿಸುವ ಪ್ರಯತ್ನವಲ್ಲದೆ ಮತ್ತೇನೂ ಅಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಟೀಕಿಸಿದ್ದಾರೆ.
ಕೇಂದ್ರ ಸರ್ಕಾರ ತನ್ನ ಯಾವುದೇ ಸಂಸ್ಥೆಗಳ ಮೂಲಕ ಎಷ್ಟೇ ದಾಳಿ ನಡೆಸಿದರೂ ಕಾಂಗ್ರೆಸ್ ಸಂಸದರು, ಶಾಸಕರು ಹಾಗೂ ನಾಯಕರು ಯಾವುದಕ್ಕೂ ಹೆದರದೆ ಎಂದಿನಂತೆ ಜನಪರ ಕಾರ್ಯಗಳಲ್ಲಿ ಸಾಗುತ್ತಾರೆಂದು ಹೇಳಿದ್ದಾರೆ.