
ಕಾಪು-ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಸುಡುಮದ್ದು(ಪಟಾಕಿ)ಯನ್ನು ಕಾಪು ಪೊಲೀಸರು ಅ.೨೯ರಂದು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಮೂಡಬೆಟ್ಟು ಗ್ರಾಮದ ಶಂಕರಪುರ ಕಡೆಯಿಂದ ಮೂಡುಬೆಟ್ಟು ದೇವಸ್ಥಾನ ಕಡೆಗೆ ಹೋಗುವ ರಸ್ತೆಯಲ್ಲಿರುವ ಕ್ಲೇರಾ ಮೆಂಡೋನ್ಸ್ ಎಂಬವರ ಮನೆಯಲ್ಲಿ ಆರೋಪಿ ಗೌತಮ್ ಪ್ರಭು ಎಂಬಾತ ಅಕ್ರಮವಾಗಿ ಪಟಾಕಿ ದಾಸ್ತಾನು ಇರಿಸಿದ್ದು, ಈ ಬಗ್ಗೆ ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು, ಒಟ್ಟು ೨ ಲಕ್ಷ ರೂ.ಮೌಲ್ಯದ ವಿವಿಧ ಕಂಪನಿಗೆ ಸೇರಿದ ವಿವಿಧ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.




























