ಕಾರ್ಕಳ: ಕಾರ್ಕಳ-ಪಡುಬಿದ್ರೆ ಹೆದ್ದಾರಿಯಲ್ಲಿ ರಿಕ್ಷಾ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಡ್ಡೆ-ಕಣಜಾರ್ ಕಟ್ಟೆ ಜಂಕ್ಷನ್ ಬಳಿ ಮಂಗಳೂರಿನಿಂದ ಕಾರ್ಕಳಕ್ಕೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ರಿಕ್ಷಾದಲ್ಲಿದ್ದ ಓರ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಭಾರತ ಮೂಲದ ಕಾರ್ಮಿಕ ಪ್ರತಾಪ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.