
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಏ.04: ಮಹಾನಗರ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವೀರೇಶ್ ಇವರ ಮೇಲೆ ಹಲ್ಲೆ ಮಾಡಿರುವ ಬಳ್ಳಾರಿಯ ಮಹಾನಗರ ಪಾಲಿಕೆ ಸದಸ್ಯ ವಿ. ಕುಬೇರ ಅವರನ್ನು ಕೂಡಲೇ ಬಂಧಿಸಬೇಕೆಂದು ಅಖಿತ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಆರ್.ಪ್ರಭುಶೇಖರಗೌಡ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು.
ವೀರಶೈವ ಲಿಂಗಾಯತ ಸಮಾಜ ಯಾವುದೇ ಇಲಾಖೆಯ ಅಧಿಕಾರಿಗಳು ಸಹ ಇಂತಹ ಘಟನೆಗಳನ್ನು ನಡೆದ ಸಂದರ್ಭದಲ್ಲಿ ನಾವು ನಮ್ಮೊಂದಿಗೆ ಇದ್ದೇವೆ ಅನ್ನುವುದು ಮರೆಯಬಾರದು ಹಾಗೆ ಆತ್ಮಸ್ಥೈರ್ಯ ಕಳೆದು ಕೊಳ್ಳದೆ ಪ್ರಾಮಾಣಿಕ ಮತ್ತು ಭ್ರಷ್ಟಾಚಾರ ದ ವಿರುದ್ಧ ನೀವು ಸೇವೆ ಸಲ್ಲಿಸಿ ಸಾರ್ವಜನಿಕರಿಗೆ ಕರ್ತವ್ಯ ನಿರ್ವಹಿಸಲು ಪಾತ್ರರಾಗಿ ಎಂದಿದ್ದಾರೆ.
ಬಳ್ಳಾರಿ ಜಿಲ್ಲೆಯ ಎಲ್ಲಾ ಇಲಾಖಾ ಅಧಿಕಾರಿಗಳು ಹೊರ ಜಿಲ್ಲೆಗಳಿಂದ ಬಂದ ಅಧಿಕಾರಿಗಳು ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದು ಕೊಳ್ಳುವುದು ಬೇಡ ನಿಮ್ಮ ಹಿಂದೇ ನಾವು ಇರುತ್ತೇವೆ ಎಂದಿದ್ದಾರೆ.




















