ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ಟಿ.ವೈ.ಆನಂದ ಆಯ್ಕೆ

ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಜ.30:
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಟಿ.ವೈ.ಆನಂದ ಚುನಾಯಿತರಾದರು.


ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಟಿ.ವೈ.ಆನಂದ ಅವರು ತಮ್ಮ ಪ್ರತಿಸ್ಪರ್ಧಿ ಆರ್.ಶ್ರೀನಿವಾಸ್ ಅವರನ್ನು ಪರಾಜಯಗೊಳಿಸಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನವನ್ನು ಹೊರತುಪಡಿಸಿ ಉಳಿದ ಪದಾಧಿಕಾರಿಗಳ ಆಯ್ಕೆ ಯಾವುದೇ ಪ್ರತಿಸ್ಪರ್ಧಿಗಳಿಲ್ಲದೆ ಅವಿರೋಧವಾಗಿ ನಡೆಯಿತು. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್, ಕಾರ್ಯದರ್ಶಿಯಾಗಿ ಸಿದ್ದಾಪುರ ಉಮೇಶ್, ಉಪಾಧ್ಯಕ್ಷರಾಗಿ ಅಘಲಯ ತಮ್ಮಣ್ಣ ನಾಯಕ ಮತ್ತು ಖಜಾಂಚಿಯಾಗಿ ಸೈಯದ್ ಖಲೀಲ್ ಅವಿರೋಧವಾಗಿ ಆಯ್ಕೆಯಾದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಕೆ.ನಾಗೇಗೌಡ ಚುನಾವಣಾ ಅಧಿಕಾರಿಯಾಗಿದ್ದರು.


ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮತ್ತೀಕರೆ ಜಯರಾಂ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಶಶಿಧರ ಕಾಡುಕೊತ್ತನಹಳ್ಳಿ, ಉಪಾಧ್ಯಕ್ಷ ಕಲ್ಲಹಳ್ಳಿ ಮಂಜುನಾಥ್, ಪದಾಧಿಕಾರಿಗಳಾದ ನಾಗಮಂಗಲ ಮಂಜೇಶ್, ಚಿನಕುರುಳಿ ಲೋಕೇಶ್, ಕೃಷ್ಣ ಸೇರಿದಂತೆ ಜಿಲ್ಲಾ ಸಂಘದ ಹಲವರಿದ್ದು ಸುಸೂತ್ರ ಚುನಾವಣೆ ನಡೆಸಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿ ಆಯ್ಕೆಯಾದವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು.


ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಟಿ.ವೈ.ಆನಂದ ಅವರನ್ನು ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಮಂಡ್ಯ ಮೂಡಾ ಅಧ್ಯಕ್ಷ ಪ್ರಕಾಶ್, ಕಾಂಗ್ರೆಸ್ ಮುಖಂಡ ವಿಜಯರಾಮೇಗೌಡ, ರಾಜ್ಯ ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ರಾಜ್ಯ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಬಸ್ ಸಂತೋಷ್ ಕುಮಾರ್, ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ರಾಜ್ಯ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಸದಸ್ಯ ಕಿಕ್ಕೇರಿ ಸುರೇಶ್ ಸೇರಿದಂತೆ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಸಂಘ ಸಂಸ್ಥೆಗಳ ಮುಖಂಡರು ಅಭಿನಂಧಿಸಿದ್ದಾರೆ.