ಸಂಜೆವಾಣಿ ವಾರ್ತೆ
ಹನೂರು ಆ 13 :– ತಾಲೂಕಿನ ಕಾವೇರಿ ವನ್ಯಜೀವಿ ವಲಯ ವ್ಯಾಪ್ತಿಯ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಅರಣ್ಯ ಪ್ರದೇಶದಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 15 ದಿನಗಳ ಹಿಂದೆ ಹುಟ್ಟಿದ್ದ ಹೆಣ್ಣು ಮತ್ತು ಗಂಡು ಮರಿಗಳು ತಾಯಿ ಹುಲಿಯಿಂದ ಬೇರ್ಪಟ್ಟು ಸಾವನ್ನಪ್ಪಿದ್ದಾಗಿ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಗಸ್ತು ತಿರುಗುತ್ತಿದ್ದ ಹುಲಿ ಮರಿಗಳು ಸಾವನಪ್ಪಿರುವುದು ಕಂಡುಬಂದಿದೆ.
ವಿಷಯ ತಿಳಿದ ಕೂಡಲೇ ಡಿ.ಸಿ.ಎಫ್ ಸುರೇಂದ್ರ, ಎ.ಸಿ.ಎಫ್ ಮರಿಸ್ವಾಮಿ, ಆರ್.ಎಫ್.ಒ ನಿರಂಜನ್ ಸೇರಿದಂತೆ ಎಸ್.ಓ.ಪಿ ಸಮಿತಿಯ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಧಿಕಾರಿಗಳ ಪ್ರಾಥಮಿಕ ನಿರೀಕ್ಷೆಯಂತೆ, ಈ ಹುಲಿ ಮರಿಗಳು ತಾಯಿ ಹುಲಿಯಿಂದ ಕಳೆದ 10?15 ದಿನಗಳಿಂದ ತಾಯಿಯಿಂದ ಬೇರ್ಪಟ್ಟು ಆಹಾರ ಹಾಗೂ ಕಾಪಾಡುವ ತೊಂದರೆಯಿಂದಾಗಿ ಎರಡು-ಮೂರು ದಿನಗಳ ವ್ಯತ್ಯಾಸದಲ್ಲಿ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.



























