
ಮಂಗಳೂರು-ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಡಿಸೆಂಬರ್ ೨ ರ ತನಕ ನಡೆಯಲಿದ್ದು, ನ. ೨೫ ರಂದು ಪಂಚಮಿ ರಥೋತ್ಸವ, ತೈಲಾಭ್ಯಂಜನ ಹಾಗೂ ೨೬ ರಂದು ಚಂಪಾಷಷ್ಠಿ ಮಹಾರಥೋತ್ಸವವು ನಡೆಯಲಿದ್ದು, ಸುಮಾರು ೫೦ ರಿಂದ ೬೦ ಸಾವಿರ ಭಕ್ತಾಧಿಗಳು ಸೇರುವ ನಿರೀಕ್ಷೆ ಇದೆ.
ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿಕೊಂಡು ಕಿರುಕುಳ ಉಂಟುಮಾಡುವುದನ್ನು ತಪ್ಪಿಸಲು ಮತ್ತು ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನ.೨೫ ರಂದು ಬೆಳಿಗ್ಗೆ ೬ ಗಂಟೆಯಿಂದ ೨೬ ರ ರಾತ್ರಿ ೧೨ ಗಂಟೆಯ ತನಕ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿರುವ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

























