ಎ.ಒ.ಎಲ್.ಇ. ಕಮಿಟಿ ಬಿ ವತಿಯಿಂದ ಡಾ. ಕುರುಂಜಿ ಪುಣ್ಯಸ್ಮರಣೆ – ಪುತ್ಥಳಿಗೆ ಹಾರಾರ್ಪಣೆ
ಸುಳ್ಯ:ಕುರುಂಜಿ ಅವರು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಹುಟ್ಟುಹಾಕಿ ಲಕ್ಷಾಂತರ ಮಂದಿಗೆ ವಿದ್ಯಾದಾನ ಮಾಡುವುದರ ಮೂಲಕ ಸಾವಿರಾರು ಮಂದಿಗೆ ಉದ್ಯೋಗದಾತ, ಅನ್ನದಾತರಾಗಿದ್ದಾರೆ. ಅವರ ಆದರ್ಶಗಳನ್ನು, ಪಂಚ ಸೂತ್ರಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಕೊಳ್ಳೋಣ ಎಂದು ಎ.ಒ.ಎಲ್.ಇ. ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ. ಹೇಳಿದರು.
ಅವರು ಗುರುವಾರ ಸುಳ್ಯದ ಆಧುನಿಕ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಕೆವಿಜಿ ಕ್ಯಾಂಪಸ್ ನಲ್ಲಿರುವ ಡಾ. ಕೆವಿಜಿಯವರ ಪುತ್ಥಳಿಗೆ ಹಾರಾರ್ಪಣೆ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಎ.ಒ.ಎಲ್.ಇ. ಕಮಿಟಿ ಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ, ಕೆವಿಜಿ ಡೆಂಟಲ್ ಕಾಲೇಜಿನ ಪ್ರಾಂಶುಪಾಲೆ ಡಾ. ಮೋಕ್ಷಾ ನಾಯಕ್, ಕೆವಿಜಿ ಐಟಿಐ ಪ್ರಾಂಶುಪಾಲ ದಿನೇಶ್ ಮಡ್ತಿಲ, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್, ಡೆಂಟಲ್ ಕಾಲೇಜಿನ ಗವನಿಂಗ್ ಕೌನ್ಸಿಲ್ ಸದಸ್ಯ ಸೂರಯ್ಯ ಸೂಂತೋಡು, ಕೆವಿಜಿ ಸುಳ್ಯ ಹಬ್ಬ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಬಂಟ್ವಾಳ್, ಶಾಫಿ ಕುತ್ತಮೊಟ್ಟೆ, ನ.ಪಂ. ಮಾಜಿ. ಸದಸ್ಯ ಗಿರೀಶ್ ಕಲ್ಲುಗದ್ದೆ, ಅಮರಜ್ಯೋತಿ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಡಾ. ಯಶೋದಾ ರಾಮಚಂದ್ರ, ಡೆಂಟಲ್ ಕಾಲೇಜ್ ಆಡಳಿತಾಧಿಕಾರಿ ಮಾಧವ ಬಿ.ಟಿ., ಪಾಲಿಟೆಕ್ನಿಕ್ ಪ್ರಾಂಶುಪಾಲ ಅಣ್ಣಯ್ಯ, ಭಾಗಮಂಡಲದ ಪ್ರಾಂಶುಪಾಲ ಶ್ರೀಕಾಂತ್ ಕುಡೆಕಲ್ಲು ಸೇರಿದಂತೆ ಎ.ಒ.ಎಲ್.ಇ. ಕಮಿಟಿ ಬಿ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಡಾ. ಕೆವಿಜಿಯವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಎ.ಒ.ಎಲ್.ಇ. ಕಮಿಟಿ ಬಿ ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.


























