ಸಂಜೆವಾಣಿ ವಾರ್ತೆ
ಪಿರಿಯಾಪಟ್ಟಣ.ಆ.12:- ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಗೂ ಕುರುಬ ಸಮುದಾಯವನ್ನು ಅವಹೇಳನಕಾರಿಯಾಗಿ ಮಾತನಾಡಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ ಗಡಿಪಾರು ಮಾಡುವಂತೆ ತಾಲೂಕು ಕನಕ ಕುರುಬ ಸಂಘವು ಒತ್ತಾಯ ಮಾಡಿದೆ.
ತಾಲೂಕು ಕನಕ ಕುರುಬ ಸಂಘದ ಅಧ್ಯಕ್ಷ ಎಚ್. ಡಿ. ಗಣೇಶ್ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತ್ಯತೀತವಾಗಿ ಪಕ್ಷಾತೀತವಾಗಿ ಪ್ರತಿ ಸಮುದಾಯಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸುವ ದೃಷ್ಟಿಯಿಂದ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಬಡವರ, ರೈತರ, ಮಹಿಳೆಯರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿ ಜೀವನ ಅಭಿವೃದ್ಧಿ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಂಡ್ಯದ ವ್ಯಕ್ತಿಯೊರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮತ್ತು ಕುರುಬ ಸಮುದಾಯವನ್ನು ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ
ನಿಂದಿಸಿದ್ದಾನೆ. ಇದನ್ನು ಸಂಘವು ತೀವ್ರವಾಗಿ ಖಂಡಿಸುತ್ತಿದ್ದು, ಈ ಕಿಡಿಗೇಡಿಯಿಂದ ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗುತ್ತಿದ್ದು, ಸಮುದಾಯಗಳ ನಡುವೆ ಕೋಮು ಘರ್ಷಣೆಗೆ ಕಾರಣವಾಗುತ್ತಿದೆ ಆದ್ದರಿಂದ ಈತನ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿ ಪತ್ರವನ್ನು ತಹಸೀಲ್ದಾರ್ ನಿಸರ್ಗ ಪ್ರಿಯ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ರವಾನಿಸಲಾಯಿತು ಮತ್ತು ಪೆÇಲೀಸ್ ವೃತ್ತ ನಿರೀಕ್ಷಕರಿಗೆ ಕಿಡಿಗೆಡಿಯ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸುನೀಲ್, ಗ್ರಾ.ಪಂ ಸದಸ್ಯೆ ಪದ್ಮ ಲತಾ, ಮುಖಂಡರಾದ ಆರ್.ಟಿ ರೇವಣ್ಣ, ಲಕ್ಷ್ಮಣ ಗೌಡ, ಲೋಹಿತ್, ಚಿಕ್ಕೆ ಗೌಡ, ಸೋಮಣ್ಣ, ಶೇಷಗಿರಿ, ರಾಜೇಗೌಡ, ಚಂದ್ರು, ಮಹದೇವ್, ಶಿವಪ್ಪ, ಬಸವರಾಜ್, ದುಷ್ಯಂತ, ಜಯರಾಮ್ ಸೇರಿದಂತೆ ಇತರರು ಹಾಜರಿದ್ದರು.

























