Home ಜಿಲ್ಲೆ ಮೈಸೂರು ಕೆಂಪೇಗೌಡರ ದೂರದೃಷ್ಟಿ ಆಡಳಿತ ಅಭಿವೃದ್ಧಿ ಜನಮಾನಸದಲ್ಲಿ ಎಂದಿಗೂ ಸ್ಥಿರವಾಗಿದೆ ಶ್ರೀ ಸೋಮನಾಥೇಶ್ವರ ಸ್ವಾಮೀಜಿ

ಕೆಂಪೇಗೌಡರ ದೂರದೃಷ್ಟಿ ಆಡಳಿತ ಅಭಿವೃದ್ಧಿ ಜನಮಾನಸದಲ್ಲಿ ಎಂದಿಗೂ ಸ್ಥಿರವಾಗಿದೆ ಶ್ರೀ ಸೋಮನಾಥೇಶ್ವರ ಸ್ವಾಮೀಜಿ

ಸಂಜೆವಾಣಿ ವಾರ್ತೆ
ಹನೂರು ಜು 10 :-
ವಿಜಯನಗರ ಸಾಮ್ರಾಜ್ಯದ ಸಾಮಂತ ಪಾಳೇಗಾರರಾಗಿದ್ದ ನಾಡಪ್ರಭು ಕೆಂಪೇಗೌಡರು, 1537 ರಲ್ಲಿ ಬೆಂಗಳೂರು ನಗರವನ್ನು ಸ್ಥಾಪಿಸಿದರು. ಅವರ ದೂರದೃಷ್ಟಿ, ಆಡಳಿತ ಕೌಶಲ್ಯ ಹಾಗೂ ನಗರದ ಅಭಿವೃದ್ಧಿಗೆ ನೀಡಿರುವ ಕೊಡಿಗೆಗಳು ಜನಮಾನಸದಲ್ಲಿ ಎಂದಿಗೂ ಸ್ಥಿರವಾಗಿದೆ ಎಂದು ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮನಾಥೇಶ್ವರ ಸ್ವಾಮೀಜಿ ತಿಳಿಸಿದರು.


ಹನೂರು ಪಟ್ಟಣದಲ್ಲಿ ಆಯೋಜಿಸಿದ್ದ ನಾಡ ಪ್ರಭು ಕೆಂಪೇಗೌಡರ 517ನೇ ಜಯಂತೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು ಬೆಂಗಳೂರು ಮಹಾನಗರದ ನಿರ್ಮಾತೃ ಕೆಂಪೇಗೌಡರು ಎಲ್ಲ ವರ್ಗದವರನ್ನು ಒಗ್ಗೂಡಿಸಿ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟರು. ನಾಡ ಪ್ರಭು ಕೆಂಪೇಗೌಡರ ಆದರ್ಶ ಗುಣ ಗಳನ್ನು ಇಂದಿನ ಯುವಕರು ಅಳವಡಿಸಿಕೊಳ್ಳಬೇಕು. ಜತೆಗೆ ಮುಂದಿನ ಪೀಳಿಗೆಗೆ ತಿಳಿಸಿಕೊಡಬೇಕು. ಇಲ್ಲವಾದಲ್ಲಿ ಇಂತಹ ಅದ್ಭುತವಾದ ಕಾರ್ಯ ಕ್ರಮಗಳಿಗೆ ಮೌಲ್ಯ ಬರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಸಹ ನಾಡಪ್ರಭು ಕೆಂಪೇಗೌಡರ ಇತಿಹಾಸ ವನ್ನು ತಿಳಿದುಕೊಳ್ಳಬೇಕು.
ಹನೂರು ಪಟ್ಟಣದಲ್ಲಿ ಪ್ರತಿವರ್ಷ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸುತ್ತಿರುವುದು ಶ್ಲಾಘನೀಯ. ಒಗ್ಗಟಟ್ಟಾಗಿದ್ದರೆ ಮಾತ್ರ ಯಾವುದೇ ಸಾಧನೆ ಮಾಡಲು ಸಾಧ್ಯ. ಸಮುದಾಯದ ವಿದ್ಯಾರ್ಥಿಗಳನ್ನು
ಗುರುತಿಸಿ ಪ್ರತಿಭಾ ಪುರಸ್ಕಾರ ಮಾಡುತ್ತಿ ರುವುದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.


ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿ, ಬೆಂಗಳೂರು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ ಎಂದರೆ ಮೂಲ ಕಾರಣ ನಾಡಪ್ರಭು ಕೆಂಪೇಗೌಡರು. ಇವರ ದೂರದೃಷ್ಟಿಯಿಂಲೇ ಐಟಿ- ಬಿಟಿ ಕಂಪನಿಗಳು ಆರಂಭಗೊಂಡಿದ್ದು, ಲಕ್ಷಾಂತರ ಜನರು ತಮ್ಮ ಬದುಕು ಕಟ್ಟಿಕೊಳ್ಳಲು ಆಶ್ರಯ ತಾಣವಾಗಿ ಬೃಹತ್ ಬೆಂಗಳೂರಾಗಿ ಬೆಳೆದು ಬಂದಿದೆ ಎಂದು ತಿಳಿಸಿದರು. ಮಾಜಿ ಶಾಸಕ ನರೇಂದ್ರ ಅವರು ಮಾತನಾಡಿದರು.


ಕಾರ್ಯಕ್ರಮದಲ್ಲಿ ವೈದ್ಯರು, ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದತ್ತೇಶ್ ಕುಮಾರ್, ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಮಂಜೆಗೌಡ, ನಿರ್ದೇಶಕ ಗಂಗಾಧರ್, ಯಳಂದೂರು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಮಾದೇಶ್, ಉಪ ಪೆÇಲೀಸ್ ಅಧೀಕ್ಷಕರು
ಮೋಹನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿಭಾ, ಇನ್ಸ್ಪೆಕ್ಟರ್ ಆನಂದ್ ಮೂರ್ತಿ, ಪಿ.ಎಸ್.ಐ ವರ್ಷಗೌಡ, ಮುಖಂಡರುಗಳಾದ ಮಂಜೇಶ್ ಗೌಡ, ಲಿಂಗರಾಜು, ಆನಂದ್ ಕುಮಾರ್, ನಟರಾಜುಗೌಡರು, ಲೋಕೇಶ್, ನವೀನ್, ಸೇರಿದಂತೆ ಇನ್ನಿತರರು ಇದ್ದರು.