
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.24: ತಾಲೂಕಿನ ಕೆ.ವೀರಾಪುರ ಗ್ರಾಮದಲ್ಲಿ ಮದುವೆ ಮೆರವಣಿಗೆಯ ವೇಳೆ ಸಿಡಿಸಿದ ಪಟಾಕಿಯಿಂದ ಗ್ರಾಮದ ಗಾದಿಲಿಂಗಪ್ಪಗೆ ಸೇರಿದ ಎರಡು ಹುಲ್ಲಿನ ಬಣಿವೆಗಳು ಸುಟ್ಟಿರುವ ಘಟನೆ ನಡೆದಿ
ಬೆಂಕಿ ಕಾಣಿಸಿಕೊಂಡ ಕೂಡಲೇ ಸಾರ್ವಜನಿಕರು ನಂದಿಸಲು ಹರಸಾಹಸಪಟ್ಟರೂ ಫಲಕಾರಿಯಾಗಲಿಲ್ಲ. ಅಗ್ನಿಶಾಮಕ ದಳದ ವಾಹನ ತಡವಾಗಿ ಸ್ಥಳಕ್ಕೆ ಆಗಮಿಸಿದ್ದರಿಂದ ಮೇವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಪರಮದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






















