
ಸ್ಯಾಂಡಲ್ವುಡ್ ನಟ ಕೋಮಲ್ ಕುಮಾರ್ ಅವರ ಜನ್ಮದಿನದ ಸಂಭ್ರಮವನ್ನು ಇನ್ನಷ್ಟು ವಿಶೇಷಗೊಳಿಸಿರುವ “ರೋಲೆಕ್ಸ್” ಚಿತ್ರತಂಡ, ಚಿತ್ರದ ಹೊಸ ಗ್ಲಿಮ್ಸ್ ಹಾಗೂ ವಿಶೇಷ ಪೋಸ್ಟರ್ನ್ನು ಅನಾವರಣಗೊಳಿಸಿದೆ. ಬಿಡುಗಡೆಯಾದ ದೃಶ್ಯಗಳಲ್ಲಿ ಕೋಮಲ್ ಕುಮಾರ್ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ಚಿತ್ರದ ಕುರಿತು ಕುತೂಹಲ ಹೆಚ್ಚಿಸಿದೆ.
ಅಂಬಟಿ ಮಧು ಮೋಹನ್ ನಿರ್ಮಾಣದಲ್ಲಿ, ಶ್ರೀನಿವಾಸ್ ಮಂಡ್ಯ ನಿರ್ದೇಶನ ಮಾಡುತ್ತಿರುವ “ರೋಲೆಕ್ಸ್” ಸಂಪೂರ್ಣ ಕೌಟುಂಬಿಕ ಹಾಸ್ಯಭರಿತ ಚಿತ್ರವಾಗಿದೆ. ಮನರಂಜನೆಗೆ ಹೆಚ್ಚಿನ ಒತ್ತು ನೀಡಿರುವ ಈ ಸಿನಿಮಾ ಎಲ್ಲ ವರ್ಗದ ಪ್ರೇಕ್ಷಕರನ್ನು ಸೆಳೆಯುವ ಭರವಸೆ ಮೂಡಿಸಿದೆ.
ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜನೆ ನೀಡಿದ್ದು, ರಾಕೇಶ್ ತಿಲಕ್ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ. ಅರವಿಂದ್ ರಾಜ್ ಸಂಕಲನ ಮಾಡಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಮುರಳಿಕೃಷ್ಣ ಕಾರ್ಯನಿರ್ವಹಿಸುತ್ತಿದ್ದು, ರಾಜೇಶ್ ವರ್ಮ ಕ್ರಿಯೇಟಿವ್ ಹೆಡ್ ಆಗಿದ್ದಾರೆ.
ಜನ್ಮದಿನದ ವಿಶೇಷವಾಗಿ ಬಿಡುಗಡೆಯಾದ ಗ್ಲಿಮ್ಸ್ ಹಾಗೂ ಪೋಸ್ಟರ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಶೀಘ್ರದಲ್ಲೇ ಚಿತ್ರದ ಮತ್ತಷ್ಟು ಅಪ್ಡೇಟ್ಗಳನ್ನು ಚಿತ್ರತಂಡ ಹಂಚಿಕೊಳ್ಳಲಿದೆ.



























