Home ಜಿಲ್ಲೆ ಮೈಸೂರು ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಸಂಜೆವಾಣಿ ನ್ಯೂಸ್
ಮೈಸೂರು: ಮೇ.10:-
ನಗರದ ರೈಲ್ವೆ ಕ್ರಿಕೆಟ್ ಮೈದಾನದಲ್ಲಿ ಇಂದು ಬೆಳಿಗ್ಗೆ ನಡೆದ ವರ್ಣರಂಜಿತ ಸಮಾರಂಭದಲ್ಲಿ ಶ್ರೀ ಸುಶಮೀಂದ್ರ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ಹತ್ತನೇ ವರ್ಷದ ಹೊನಲು ಬೆಳಕಿನ ಶ್ರೀ ಸುಶಮೀಂದ್ರ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.
ನಗರದ ರಂಗರಾವ್ ಅಂಡ್ ಸನ್ಸ್ ಗ್ರೂಪ್‍ನ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಕುಮಾರ್ ಮಾವತ್ತೂರು ರಾಮಚಂದ್ರ ಅವರು ಜ್ಯೋತಿ ಬೆಳಗುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು.


ಬಳಿಕ ಮಾತನಾಡಿ, ಶ್ರೀ ರಾಘವೇಂದ್ರ ಸ್ವಾಮಿಗಳ ಮನೆತನದವರು ನಡೆಸುತ್ತಿರುವ ಈ ಕ್ರಿಕೆಟ್ ಪಂದ್ಯಾವಳಿ ನೂರು ವರ್ಷಗಳ ಕಾಲ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಕಂಠಕುಮಾರ್ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ, ಶ್ರೀ ಸುಶಮೀಂದ್ರ ಸೇವಾ ಪ್ರತಿಷ್ಠಾನವು ನಡೆಸುತ್ತಿರುವ ಕ್ರಿಕೆಟ್ ಪಂದ್ಯಾವಳಿಗೆ ಶುಭಹಾರೈಸಿದರು. ಸಾಹಿತಿ, ಪತ್ರಕರ್ತ ರಾಜೇಶ್ ಬೋರೆ, ಹಾವೇರಿ ಅಚ್ಚುತಾಚಾರ್, ರಾಜಾ ಶ್ರೀನಿವಾಸ, ರಾಜ ಶ್ರೀಕಾಂತಾಚಾರ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.