
ಮಂಗಳೂರು: ಗಾಂಜಾವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪಿ ಉಳ್ಳಾಲ ಮುಕ್ಕಚೇರಿಯ ಹಿಲರಿಯ ನಗರದ ಇರ್ಷಾದ್ ಯಾನೆ ಇರ್ಷಾ ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿ ೧,೫೬,೦೦೦ ರೂ. ಮೌಲ್ಯದ ೩.೧೩೮ ಕೆಜಿ ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ನಗರದ ಮೇರಿಹಿಲ್ ಹ್ಯಾಲಿಪ್ಯಾಡ್ ಮೈದಾನದ ಬಳಿ ಬುಧವಾರ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಸ್ಕೂಟರ್ ಸಮೇತ ಸೊತ್ತು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಆರೋಪಿಯ ವಿರುದ್ಧ ಈ ಹಿಂದೆ ಉಳ್ಳಾಲ ಮತ್ತು ಮಂಗಳೂರು ಸಿಎಸ್‌ಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


























