Home ಜಿಲ್ಲೆ ಮೈಸೂರು ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿ ಕೇಂದ್ರ ಸೇರಿದಂತೆ ವಿವಿಧೆಡೆ ಜಿಲ್ಲಾಧಿಕಾರಿ ಭೇಟಿ

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿ ಕೇಂದ್ರ ಸೇರಿದಂತೆ ವಿವಿಧೆಡೆ ಜಿಲ್ಲಾಧಿಕಾರಿ ಭೇಟಿ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.02-
ಜಿಲ್ಲಾಧಿಕಾರಿ ಶ್ರೀರೂಪ ಅವರುಗುಂಡ್ಲುಪೇಟೆ ಭಾಗದ ಶಾಲೆ, ದೇವಾಲಯ, ಪ್ರವಾಸಿ ತಾಣಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು.
ಗುಂಡ್ಲುಪೇಟೆ ಪಟ್ಟಣದ ಶತಮಾನ ಪೂರೈಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.ಚಿಕ್ಕತುಪ್ಪೂರಿನಲ್ಲಿರುವಆದರ್ಶ ಶಾಲೆಗೆ ಭೇಟಿಕೊಟ್ಟು ವೀಕ್ಷಿಸಿದ ಜಿಲ್ಲಾಧಿಕಾರಿಯವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.


ತ್ರಿಯಂಬಕಪುರಗ್ರಾಮದಲ್ಲಿರುವಇತಿಹಾಸ ಪ್ರಸಿದ್ದ ತ್ರಿಯಂಬಕೇಶ್ವರದೇವಾಲಯಕ್ಕೆ ತೆರಳಿ ದೇವಾಲಯದ ವಿನ್ಯಾಸ ಹಾಗೂ ವಾಸ್ತು ಶಿಲ್ಪವನ್ನು ವೀಕ್ಷಿಸಿದರು. ದೇವಾಲಯದಐತಿಹಾಸಿಕ ಹಿನ್ನೆಲೆ ಹಾಗೂ ಸಂರಕ್ಷಣೆಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಪ್ರಸಿದ್ದ ಪ್ರವಾಸಿ ತಾಣವಾದ ಬಂಡೀಪುರದ ಸಫಾರಿಕೇಂದ್ರಕ್ಕೆ ಭೇಟಿ ನೀಡಿ ಪ್ರವಾಸಿಗರಿಗೆ ಒದಗಿಸಿರುವ ಸೌಲಭ್ಯಗಳನ್ನು ವೀಕ್ಷಿಸಿದರು.ಸಫಾರಿಕೇಂದ್ರದಲ್ಲಿ ಮಾರಾಟ ಮಾಡಲಾಗುತ್ತಿರುವ ಉತ್ಪನ್ನಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಯವರು ಸ್ಥಳೀಯವಾಗಿ ಉತ್ಪಾದಿಸಿದ ಕರಕುಶಲ ವಸ್ತುಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡುವಂತೆಅರಣ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.


ಗುಂಡ್ಲುಪೇಟೆ ಹೊರವಲಯದಲ್ಲಿರುವಘನತ್ಯಾಜ್ಯ ವಿಲೇವಾರಿಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಮೇಲುಕಾಮನಹಳ್ಳಿಯಲ್ಲಿ ಬುಡಕ್ಟು ವಿವಿದ್ದೋದ್ದೇಶಕೇಂದ್ರಕಾಮಗಾರಿಯನ್ನು ವೀಕ್ಷಿಸಿದರು.
ಭೇಟಿಯ ವೇಳೆ ತಹಶೀಲ್ದಾರ್ ತನ್ಮಯ್, ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ, ವಲಯಅರಣ್ಯಾಧಿಕಾರಿ ಸತೀಶ್, ಗುಂಡ್ಲುಪೇಟೆ ಪುರಸಭೆ ಮುಖ್ಯಾಧಿಕಾರಿ ಶರವಣ, ಇತರರುಇದ್ದರು.