ಗ್ರಾಮೀಣ ಜನರಿಗೆ ಆದ್ಯತೆ ಮೇರೆಗೆ ಉದ್ಯೋಗ ಕಲ್ಪಿಸಲು ಜಿ.ಪಂ. ಸಿ.ಇ.ಒ ಸೂಚನೆ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಸೆ.20:-
ಗ್ರಾಮೀಣ ಜನರಿಗೆ ಆದ್ಯತೆ ಮೇರೆಗೆ ಉದ್ಯೋಗ ಕಲ್ಪಿಸಲು ಎಲ್ಲಾ ಗ್ರಾಮಪಂಚಾಯತಿಗಳು ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮೋನಾ ರೋತ್ ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.


ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು, ನರೇಗಾ, ಸ್ವಚ್ಛ ಭಾರತ್ ಮಿಷನ್, ಎನ್.ಆರ್.ಎಲ್.ಎಂ, ವಸತಿ, ತೆರಿಗೆ ವಸೂಲಾತಿ ವಿಷಯಗಳಿಗೆ ಸಂಬಂಧಿಸಿದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಗ್ರಾಮೀಣ ಜನರಿಗೆ ಆದ್ಯತೆ ಮೇರೆಗೆ ಉದ್ಯೋಗ ಕಲ್ಪಿಸಲು ಎಲ್ಲಾ ಗ್ರಾಮಪಂಚಾಯತಿಗಳು ಕ್ರಮವಹಿಸಬೇಕು ಸಾಕಷ್ಟು ಗ್ರಾಮಪಂಚಾಯತಿಗಳಲ್ಲಿ ಉದ್ಯೋಗ ಬೇಡಿಕೆ ಇರುವ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನರೇಗಾ ಮಾರ್ಗಸೂಚಿಯಂತೆ ತುರ್ತಾಗಿ ಕೆಲಸ ನೀಡಲು ಕ್ರಮವಹಿಸಬೇಕು. ಅನುμÁ್ಟನ ಇಲಾಖೆಗಳಾದ ಕೃಷಿ. ತೋಟಗಾರಿಕೆ, ಅರಣ್ಯ ಇಲಾಖೆಗಳಲ್ಲೂ ನಿಗಧಿತ ಪ್ರಗತಿ ಸಾಧಿಸಬೇಕು. ತೋಟಗಾರಿಕೆ ಇಲಾಖೆಯಡಿ ಸಾಕಷ್ಟು ಫಲಾನುಭವಿಗಳಿಗೆ ನರೇಗಾ ಯೋಜನೆ ಕ್ರಿಯಾಯೋಜನೆ ಅನುಮೋದನೆ ನೀಡಲಾಗಿದ್ದು, ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವಂತೆ ಅನುಷ್ಠಾನ ಇಲಾಖೆಯ ಮುಖ್ಯಸ್ಥರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಸಾಮಾಜಿಕ ಅರಣ್ಯ ಇಲಾಖೆಯು ನರೇಗಾ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ರಸ್ತೆ ಬದಿ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಸಸಿ ನೆಡುವ ಕಾಮಗಾರಿಗಳನ್ನು ಕೈಗೊಳ್ಳಲು ಸೂಕ್ತ ಸಮಯವಾಗಿದ್ದು ತುರ್ತಾಗಿ ಕ್ರಮವಹಿಸಬೇಕು. ಕೃಷಿ ಇಲಾಖೆ, ಹಾಗೂ ರೇμÉ್ಮ ಇಲಾಖೆಗಳು ಸಹ ನರೇಗಾ ಯೋಜನೆಯಡಿ ವೈಯಕ್ತಿಕ ಸೌಲಭ್ಯ ಒದಗಿಸುವಲ್ಲಿ ಕ್ರಮ ಕೈಗೊಳ್ಳಬೇಕು. ಹಿಪ್ಪುನೇರಳೆ ಬೆಳೆಯಲು ನೆರವು ನೀಡಲು ನರೇಗಾ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸೂಚನೆ ನೀಡಿದರು.


ಗ್ರಾಮೀಣ ಪ್ರದೇಶಗಳಲ್ಲಿ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಬೂದು ನೀರು ನಿರ್ವಹಣೆಯಡಿ 11 ಗ್ರಾಮ ಪಂಚಾಯತಿಗಳಲ್ಲಿ 1189 ಕಾಮಗಾರಿಗಳನ್ನು ಅನುμÁ್ಟನಗೊಳಿಸಲಾಗುತ್ತಿದೆ ಈ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಮುಕ್ತಾಯಗೊಳಿಸಲು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಹಾಗೂ ಗ್ರಾಮಪಂಚಾಯತಿಗಳು ಕ್ರಮವಹಿಸಬೇಕು. ಜಿಲ್ಲೆಯ 29 ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದೊಂದಿಗೆ ಸಮನ್ವಯ ಸಾಧಿಸಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಾಣ ಮಾಡಬೇಕಿದ್ದು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ತುರ್ತಾಗಿ ಕಾಮಗಾರಿ ಪ್ರಾರಂಭಿಸಬೇಕು. ಹಾಗೂ ಈಗಾಗಲೇ ಪ್ರಾರಭಿಸಿರುವ ಕಾಮಗಾರಿಗಳನ್ನು ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಯೋಜನೆಯಡಿ ಶಾಲಾ ಅಭಿವೃದ್ದಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಅನುμÁ್ಟನಗೊಳಿಸಬೇಕು ದುರ್ಬಲ ವರ್ಗದ ಕುಟುಂಬಗಳ ಸುಸ್ಥಿರ ಅಭಿವೃದ್ದಿಗೆ ನೆರವಾಗುವ ಜಾನುವಾರು ಕೊಟ್ಟಿಗೆ, ತೋಟಗಾರಿಕೆ ಹಾಗೂ ರೇμÉ್ಮ ಪ್ರದೇಶ ವಿಸ್ತರಣೆ, ಪ್ರಗತಿಯಲ್ಲಿರುವ ಶಾಲಾ ಶೌಚಾಲಯ, ಶಾಲಾ ಕಾಂಪೌಂಡ್, ಆಟದ ಮೈದಾನ, ಮಹಿಳೆಯರ ಬಲವರ್ಧನೆಗೆ ಪೂರಕವಾದ ಸಂಜೀವಿನಿ ಶೆಡ್‍ಗಳನ್ನು ಆದ್ಯತೆ ಮೇರೆಗೆ ಅನುμÁ್ಟನಗೊಳಿಸಬೇಕು ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.


ಗ್ರಾಮಪಂಚಾಯತಿ ವ್ಯಾಪ್ತಿಯ ಕೂಸಿನ ಮನೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಆರೈಕೆದಾರರಿಗೆ ನಿಗಧಿತ ಸಮಯದಲ್ಲಿ ವೇತನ ಪಾವತಿಗೆ ಕ್ರಮವಹಿಸುವಂತೆ ತಿಳಿಸಿದರು. ಸಾಮಾಜಿಕ ಪರಿಶೋಧನೆಯಡಿ ಅಡಾಕ್ ಸಮಿತಿ ಸಭೆಗಳನ್ನು ನಡೆಸುವುದರೊಂದಿಗೆ ಪ್ರಕರಣಗಳ ತೀರುವಳಿಗೆ ಕ್ರಮವಹಿಸುವಂತೆ ಹಾಗೂ ಒಂಬುಡ್ಸ್‍ಮನ್ ಪ್ರಕರಣಗಳಲ್ಲಿ ವಸೂಲಾತಿಗೆ ಬಾಕಿ ಇರುವುದನ್ನು ವಸೂಲು ಮಾಡಲು ಕ್ರಮ ಕೈಗೊಳ್ಳುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಾಕೀತು ಮಾಡಿದರು. ಎಲ್ಲಾ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈಗಾಗಲೇ ನೀರಿನ ಸಮಸ್ಯೆ ಕಂಡುಬಂದಿರುವ ಗ್ರಾಮಗಳಿಗೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಬೇಕು ಒಟ್ಟಾರೆ ಯಾವುದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬಾರದಂತೆ ಕ್ರಮ ಕೈಗೊಳ್ಳಲು ಕಾರ್ಯಪಾಲಕ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.


ಜಿಲ್ಲೆಯಲ್ಲಿ 108538 ಸ್ವ-ಸಹಾಯ ಸಂಘದ ಸದಸ್ಯರನ್ನು ಎನ್.ಆರ್.ಎಲ್.ಎಂ ಯೋಜನೆಯಡಿ ತರಲಾಗಿರುತ್ತದೆ. “ನಲ್ ಜಲ್ ಮಿತ್ರ” ಯೋಜನೆಯಡಿ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಬಹು ಕೌಶಲ್ಯ ಯೋಜನೆಯಡಿ 152 ಸ್ವ-ಸಹಾಯ ಸಂಘದ ಮಹಿಳೆಯರನ್ನು ಆಯ್ಕೆ ಮಾಡಲಾಗಿದ್ದು, 55 ಅಭ್ಯರ್ಥಿಗಳಿಗೆ ತರಬೇತಿಯನ್ನು ಈಗಾಗಲೇ ನೀಡಲಾಗಿರುತ್ತದೆ. ಬಾಕಿ ಇರುವ 77 ಅಭ್ಯರ್ಥಿಗಳಿಗೆ ಮುಂದಿನ ವಾರದಿಂದ ತರಬೇತಿಯನ್ನು ಆಯೋಜಿಸಲು ಕ್ರಮ ವಹಿಸುವಂತೆ ಕಟ್ಟುನಿಟ್ಟಾಗಿ ಹೇಳಿದರು.


ಸರ್ಕಾರದ ಆದೇಶದಂತೆ 130 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕುಟಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಎಂ.ಬಿ.ಕೆ, ಎಲ್.ಸಿ.ಆರ್.ಪಿ, ಕೃಷಿ ಸಖಿ, ಪಶು ಸಖಿ) ಸ್ಥಳಾವಕಾಶವನ್ನು ಒದಗಿಸಿಕೊಡಲು ಸೂಕ್ತ ಕ್ರಮವಹಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಪ್ರತಿ ಮಾಹೆಯಾನ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳಿಗೆ ಬಿಡುಗಡೆ ಮಾಡಲಾಗುತ್ತಿರುವ ಅನುದಾನಗಳ ಖರ್ಚು ಮತ್ತು ವೆಚ್ಚದ ಮಾಹಿತಿಯನ್ನು ಜಿಲ್ಲಾ ಘಟಕ್ಕೆ ಸಲ್ಲಿಸುವಂತೆ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.
ಎಲ್ಲಾ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳಲ್ಲೂ ನಿಗದಿತ ಕಾಲ ಮೀತಿಯೊಳಗೆ ಶಾಸನ ಬದ್ದ ಲೆಕ್ಕ ಪರಿಶೋದನೆ ಮತ್ತು ಅಂತರಿಕ ಲೆಕ್ಕ ಪರಿಶೋದನೆಯ ಮಾಹಿತಿಯನ್ನು ಡೃಢಿಕರಿಸಿ ಸಲ್ಲಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.


ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ)ರಡಿ 2024-25ನೇ ಸಾಲಿನಲ್ಲಿ ಫಲಾನುಭವಿಗಳ ಆಯ್ಕೆಗೆ ಸಂಬಂಧಿಸಿದಂತೆ 2018ರ ವಸತಿ/ನಿವೇಶನ ರಹಿತರ ಸಮೀಕ್ಷಾ ಆದ್ಯತಾ ಪಟ್ಟಿಯಲ್ಲಿರುವ ಫಲಾನುಭವಿಗಳನ್ನು ಮನೆ ಮಂಜೂರಾತಿಗೆ ಆಯ್ಕೆ ಮಾಡಬೇಕಾಗಿರುವುದರಿಂದ ಗ್ರಾಮ ಸಭೆಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆಮಾಡಿ ಗ್ರಾಮ ಪಂಚಾಯಿತಿ ನಡವಳಿಯಲ್ಲಿ ನಮೂದಿಸಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಜಿಲ್ಲಾ ಪಂಚಾಯತ್‍ಗೆ ಸಲ್ಲಿಸಿ ಸೆಪ್ಟೆಂಬರ್ ಮಾಹೆಯ ಅಂತ್ಯದೊಳಗೆ ಅನುಮೋದನೆ ಪಡೆದುಕೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಗ್ರಾಮ ಪಂಚಾಯಿತಿಗಳಲ್ಲಿ ಬಾಕಿ ಇರುವ ಆಕ್ಷೇಪಣೆ ಹಾಗೂ ವಸಲಾತಿ ಕಂಡಿಕೆಗಳ ತೀರುವಳಿಗೆ ಸಂಬಂದಿಸಿದಂತೆ 100 ದಿನಗಳ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ತುರ್ತಾಗಿ ತೀರುವಳಿಗೆ ಕ್ರಮವಹಿಸುವಂತೆ ಹಾಗೂ ಲೆಕ್ಕಗಳನ್ನು ಪಂಚತಂತ್ರ 2.0 ತಂತ್ರಾಂಶದಲ್ಲಿ ವರ್ಷಾಂತ್ಯಗೊಳಿಸುವಂತೆ ಹಾಗೂ ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.


ಗ್ರಾಮ ಪಂಚಾಯಿತಿಗಳ 15ನೇ ಹಣಕಾಸು ಯೋಜನೆಯಡಿ ಅನುಮೋದಿಸಲಾಗಿರುವ ಕ್ರಿಯಾ ಯೋಜನೆಯಂತೆ ಕುಡಿಯುವ ನೀರಿನ ಕಾಮಗಾರಿಗಳು ಹಾಗೂ ಇನ್ನಿತರೆ ಕಾಮಗಾರಿಗಳನ್ನು ಕೈಗೊಂಡಿರುವ ಬಗ್ಗೆ ಹಾಗೂ ಅನುದಾನದ ವೆಚ್ಚದ ವಿವರಗಳನ್ನು ಒದಗಿಸುವಂತೆ ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು ಹಾಗೂ 15ನೇ ಹಣಕಾಸು ಯೋಜನೆಯ ಮಾರ್ಗಸೂಚಿಯಂತೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.


ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು, ಮುಖ್ಯ ಯೋಜನಾಧಿಕಾರಿಗಳು, ಮುಖ್ಯ ಲೆಕ್ಕಾಧಿಕಾರಿಗಳು, ಸಹಾಯಕ ಕಾರ್ಯದರ್ಶಿಗಳು ಸಭೆಯಲ್ಲಿ ಹಾಜರಿದ್ದರು.