Home ಜಿಲ್ಲೆ ಮೈಸೂರು ಗ್ರಾಮ ದೇವತೆ ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ

ಗ್ರಾಮ ದೇವತೆ ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ

ಸಂಜೆವಾಣಿ ವಾರ್ತೆ
ಹುಣಸೂರು, ಅ.09:-
ನಗರದ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಒಂಬತ್ತು ದಿನಗಳ ಕಾಲ ವಿಶೇಷ ನವರಾತ್ರಿ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಹೆಚ್.ವೈ.ಮಹದೇವ್ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.11ರಿಂದ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಾಯಿಯ ದರ್ಶನ ಪಡೆದು ಪುನೀತರಾಗುವಂತೆ ಮನವಿ ಮಾಡಿದರು.


ಅ.21ರಂದು ಮಧ್ಯಾಹ್ನ 12.30ಕ್ಕೆ ನಗರದ ಪ್ರಮುಖ ರಾಜ ಬೀದಿಗಳಲ್ಲಿ ಅಲಂಕೃತ ಮುತ್ತು ಮಾರಿಯಮ್ಮನ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ಅಶೋಕ್ ರಾಜಲಿಂಗಯ್ಯ ಮಾತನಾಡಿ, ದೇವಿಯ ದರ್ಶನಕ್ಕೆ ಆಗಮಿಸುವ ಎಲ್ಲಾ ಭಕ್ತಾಧಿಗಳಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿದೆ. ನವರಾತ್ರಿ ಅಂಗವಾಗಿ ಪ್ರತಿದಿನ ದೇವಿಯ ವಿವಿಧ ರೂಪಗಳ ಅಲಂಕಾರ ಹಾಗೂ ದರ್ಶನದ ವ್ಯವಸ್ಥೆ ಇರಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿ ಸದಸ್ಯರಾದ ಪ್ರಕಾಶ್ ಯೋಗೇಶ್, ಸುರೇಂದ್ರ ಹಾಗೂ ವ್ಯವಸ್ಥಾಪಕ ಬೋಪಾಲ್ ರಾವ್ ಉಪಸ್ಥಿತರಿದ್ದರು.