ಗ್ರಾ.ಪಂ. ಉಪ ಚುನಾವಣೆ: ನಿಷೇಧಾಜ್ಞೆ

ಮಂಗಳೂರು- ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಮೇ ೨೫ ರಂದು ಬೆಳಿಗ್ಗೆ ೬ ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಗ್ರಾಮ ಪಂಚಾಯತ್‌ಗಳ ಉಪಚುನಾವಣೆ -ಮೇ ೨೦೨೫ ನಡೆಯಲಿರುವ ಒಟ್ಟು ೮ ಮತಗಟ್ಟೆ ಕೇಂದ್ರಗಳ ಸುತ್ತಮುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಆನಂದ್ ಕೆ ಆದೇಶಿಸಿದ್ದಾರೆ.
ಮತಗಟ್ಟೆ ವ್ಯಾಪ್ತಿಯಲ್ಲಿ ೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿ??ಧಿಸಿದೆ. ಚುನಾವಣಾ ಅಭ್ಯರ್ಥಿ / ಬೆಂಬಲಿಗರು ಸೇರಿ ೫ ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದ್ದಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್‌ಸ್ಪಾಲ್, ಸೈಬರ್ ಕೆಫೆಗಳನ್ನು ನಿಬರ್ಂಧಿಸಿದೆ. ಮತದಾನ ದಿನದಂದು ಮತಗಟ್ಟೆಗಳ ೨೦೦ ಮೀಟರ್ ಒಳಗೆ ಚುನಾವಣಾ ಪ್ರಚಾರ ಮಾಡುವುದನ್ನು ನಿಷೇಧಿಸಿಸಲಾಗಿದೆ. ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿ??ಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ/ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.
ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿ ಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುತ್ತದೆ.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಅಜ್ಞೆ ಅನ್ವಯಿಸುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಕ್ರಮ ವಹಿಸುವುದು. ಮೇಲ್ಕಂಡ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳನ್ನು ಕೈಗೊಳ್ಳುವಂತಿಲ್ಲ. ಮೇಲ್ಕಂಡ ಅವಧಿಯಲ್ಲಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರುಗಳು ಕಡ್ಡಾಯವಾಗಿ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು. ಮತದಾನ ದಿನದಂದು ಮತಗಟ್ಟೆಗಳ ಸುತ್ತ ೨೦೦ ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೊ?ಸ್ಟರ್/ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಆನಂದ್ ಕೆ ಆದೇಶಿಸಿದ್ದಾರೆ.
ಸಂತೆ ನಿಷೇಧ: ಮೇ ೨೫ ರಂದು ನಡೆಯುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮತ್ತು ಸಾರ್ವಜನಿಕರು ಮತದಾನ ಮಾಡಲು ಅನುಕೂಲವಾಗುವಂತೆ ಮೇ ೨೫ ರಂದು ಉಪ ಚುನಾವಣೆ ನಡೆಯಲಿರುವ ಪ್ರದೇಶಗಳ ವ್ಯಾಪ್ತಿಯಲ್ಲಿ ನಡೆಯುವ ಸಂತೆ, ಜಾತ್ರೆ ಇತ್ಯಾದಿಗಳನ್ನು ನಿ??ಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಆನಂದ್ ಕೆ ಆದೇಶಿಸಿದ್ದಾರೆ.
ಮಸ್ಟರಿಂಗ್ ಕೇಂದ್ರಗಳಲ್ಲಿ ನಿಷೇಧಾಜ್ಞೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‌ಗಳ ಉಪಚುನಾವಣೆ ಮೇ ೨೪ ರಂದು ಮಸ್ಟರಿಂಗ್ ಮತ್ತು ಮೇ ೨೫ ರಂದು ಡಿಮಸ್ಟರಿಂಗ್ ಕಾರ್ಯವು ನಡೆಯಲಿದ್ದು, ಚುನಾವಣೆ ಕಾರ್ಯವು ಸುಗಮವಾಗಿ, ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಮೇ ೨೪ ರ ಬೆಳಿಗ್ಗೆ ೬ ಗಂಟೆಯಿಂದ ಮೇ ೨೫ ರ ಸಂಜೆ ಡಿಮಸ್ಟರಿಂಗ್ ಕಾರ್ಯ ಮುಕ್ತಾಯವಾಗುವವರೆಗೆ ಉಳ್ಳಾಲ ತಾಲೂಕು ಕಚೇರಿ, ಬಂಟ್ವಾಳ ತಾಲೂಕು ಆಡಳಿತ ಸೌಧ, ಸುಳ್ಯ ತಾಲೂಕು ಆಡಳಿತ ಸೌಧ ಸಭಾಂಗಣ, ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಆನಂದ್ ಕೆ ಆದೇಶಿಸಿದ್ದಾರೆ.