ಚರಂಡಿಗೆ ಪಲ್ಟಿಯಾದ ಕಾರು – ಪ್ರಯಾಣಿಕರು ಅಪಾಯದಿಂದ ಪಾರು

ಸುಳ್ಯ:ಸುಳ್ಯದ ಪೈಚಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೆದ್ದಾರಿ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ನಡೆದಿದೆ.
ಪುತ್ತೂರು ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಕಾರು ಬೊಳುಬೈಲು ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಪೈಚಾರ್ ಸಮೀಪದ ಬೊಳುಬೈಲು ಬಳಿ ಬರಂಡಿಗೆ ಪಲ್ಟಿಯಾದ ಕಾರಿನ ಚಾಲಕ ಸೇರಿದಂತೆ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯವಾಗಿ ಅಪಾಯದಿಂದ ಪಾರಾಗಿದ್ದಾರೆ. ಗಾಯಳುಗಳನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.