ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ

ಸಂಜೆವಾಣಿ ನ್ಯೂಸ್
ಮೈಸೂರು: ಜೂ.27:-
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಷಾಢ ಮಾಸದ ಸಂಭ್ರಮ, ಇಂದು ಮೊದಲ ಆಷಾಢ ಶುಕ್ರವಾರದಲ್ಲಿ ಹಿನ್ನೆಲೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಲಗ್ಗೆಯಿಟ್ಟು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತಿದ್ದಾರೆ.


ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟದಲ್ಲಿ ಹೂವೂಗಳು ತಳಿರು ತೋರಣ, ದೀಪಾಲಂಕಾರ ಭಕ್ತರನ್ನ ಸ್ವಾಗತಿಸುತ್ತಿದ್ದು, ನಾಡ ಅಧಿದೇವಿ ಚಾಮುಂಡೇಶ್ವರಿ ತಾಯಿಗೆ ಮುಂಜಾನೆ ತಾಯಿಗೆ ಪಂಚಾಮೃತ ಅಭಿಷೇಕ, ಅರ್ಚನೆ ಮಾಡಲಾಯಿತು. ತಾಯಿ ಚಾಮುಂಡೇಶ್ವರಿ ಹೂವಿನ ನಡುವೆ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಾ ಭಕ್ತರಿಗೆ ದರ್ಶನ ನೀಡಿದ್ದು, ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನಲೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.


ಪ್ರತಿ ವರ್ಷದಂತೆ ಈ ಬಾರಿಯೂ ಖಾಸಗಿ ವಾಹನಗಳ ಪ್ರವೇಶ ನಿರ್ಭಂಧಿಸಲಾಗಿದ್ದು ಕೆ.ಎಸ್.ಆರ್.ಟಿ.ಸಿ ವತಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಮಹಲ್ ಪ್ಯಾಲೇಸ್ ಆವರಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.


ಭಕ್ತರಿಗೆ ನಾಡದೇವಿಯ ದರ್ಶನ ಪಡೆಯಲು ಜಿಲ್ಲಾಡಳಿತದ ವತಿಯಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ 300ರೂ , 2 ಸಾವಿರ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. 2000 ಟಿಕೆಟ್ ಪಡೆದವರಿಗೆ ಲಲಿತ ಮಹಲ್ ನಿಂದ ಬೆಟ್ಟಕ್ಕೆ ಎಸಿ ಬಸ್‍ನಲ್ಲಿ ಕರೆದುಕೊಂಡು ಹೋಗಿ ಬೆಟ್ಟದಲ್ಲಿ ನೇರವಾಗಿ ದರ್ಶನ ಮಾಡಿ ನಂತರ ಪ್ರಸಾದ ರೂಪದಲ್ಲಿ ಚಾಮುಂಡೇಶ್ವರಿ ವಿಗ್ರಹ, ಲಾಡು, ಕುಡಿಯುವ ನೀರಿನ ಬಾಟಲ್ ,ಒಂದು ಬ್ಯಾಗ್ ವಿತರಿಸಲಾಗುತ್ತಿದೆ.


ಪ್ರತಿವರ್ಷಕ್ಕಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನಲೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಚಿವರು, ಶಾಸಕರು, ಸಂಸದರು , ಅಧಿಕಾರಿಗಳು ದೇವರ ದರ್ಶನ ಪಡೆದರು. ರಾತ್ರಿ 10ಗಂಟೆವರೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.


ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಪುತ್ರ ಸೂರಜ್ ರೇವಣ್ಣ ಅವರು ಸಹ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.