Home ಜಿಲ್ಲೆ ಮೈಸೂರು ಚಾ.ನಗರ ಸೇವಾ ಭಾರತಿ ಕನ್ನಡ ಮಾಧ್ಯಮ ಶಾಲೆಗೆ ಶೇ.93ರಷ್ಟು ಫಲಿತಾಂಶ

ಚಾ.ನಗರ ಸೇವಾ ಭಾರತಿ ಕನ್ನಡ ಮಾಧ್ಯಮ ಶಾಲೆಗೆ ಶೇ.93ರಷ್ಟು ಫಲಿತಾಂಶ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಏ.24:-
ನಗರದ ಸೇವಾಭಾರತಿ ಕನ್ನಡ ಮಾಧ್ಯಮ ಶಾಲೆಯು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆ -1ರಲ್ಲಿ 42 ವಿದ್ಯಾರ್ಥಿಗಳು ಉತ್ತಿರ್ಣರಾಗುವ ಮೂಲಕ ಶಾಲೆಗೆ ಶೇ. 93 ರಷ್ಟು ಫಲಿತಾಂಶ ಬಂದಿದೆ.

ಶಾಲೆಯಿಂದ ಪರೀಕ್ಷೆ ಬರೆದಿದ್ದ 45 ವಿದ್ಯಾರ್ಥಿಗಳ ಪೈಕಿ 42 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವ ಮೂಲಕ ಶೇ 93.33% ಫಲಿತಾಂಶ ಬಂದಿದೆ. ಶಾಲೆಯ ವಿದ್ಯಾರ್ಥಿಗಳಾದ ರಾಘವೇಂದ್ರನ್.ಡಿ ಮತ್ತು ಮಧುರ ಸಮವಾಗಿ 568 (90.88%) ಸಮ ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಉಳಿದಂತೆ ತೇಜಸ್ವಿನಿ. ಎಸ್ 561 (89.76%) ಶಾಲೆಗೆ ದ್ವಿತೀಯ ಮತ್ತು ಕೆ.ಶುಭ 554 (88.64%) ಶಾಲೆಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದು, ಮಧುರ ಪ್ರಥಮ ಭಾμÉ ಕನ್ನಡದಲ್ಲಿ 125ಕ್ಕೆ 125, ಅರ್ಜುನ್.ಎನ್, ಮಧುರ, ಕೆ.ಶುಭ ತೃತೀಯ ಭಾμÉ ಹಿಂದಿಯಲ್ಲಿ 100ಕ್ಕೆ 100 ಅಂಕಗಳನ್ನು ಪಡೆದಿರುತ್ತಾರೆ. ಶಾಲೆಯಿಂದ ಪರೀಕ್ಷೆ ಬರೆರಿದ್ದ 42 ವಿದ್ಯಾರ್ಥಿಗಳ ಪೈಕಿ ನಾಲ್ವರು ಅತ್ಯುನ್ನತ ಶ್ರೇಣಿಯಲ್ಲಿ, 22 ಮಂದಿ ಪ್ರಥಮ ಶ್ರೇಣೀಯಲ್ಲಿ, 9 ಮಂದಿ ದ್ವೀತೀಯ ಹಾಗೂ 6 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಅಲ್ಲದೇ ಗ್ರಾಮಾಂತರ ವಿದ್ಯಾರ್ಥಿಗಳಿಂದ ಶೇ 100% ಫಲಿತಾಂಶ ಬಂದಿರುತ್ತದೆ. 11 ವಿದ್ಯಾರ್ಥಿಗಳು 500ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ತಂದಿದ್ದಾರೆ.
ಈ ಉತ್ತಮ ಗುಣಾತ್ಮಕ ಫಲಿತಾಂಶವನ್ನು ನೀಡಿದ ಎಲ್ಲಾ ವಿದ್ಯಾರ್ಥಿಗಳಿಗೂ ಸೇವಾಭಾರತಿಯ ಆಡಳಿತ ಮಂಡಳಿ, ಶಾಲೆಯ ಶಿಕ್ಷಕ ವೃಂದದವರು ಅಭಿನಂದನೆಯನ್ನು ಸಲ್ಲಿದ್ದಾರೆ.