
ಸಂಜೆವಾಣಿ ನ್ಯೂಸ್
ಮೈಸೂರು.ಜೂ.29:- ಜಾತಿಯ ಹೆಸರಲ್ಲಿ ಅಶಾಂತಿ, ವೈಷಮ್ಯ ಸೃಷ್ಟಿಸುವ ಹೀನ ಕೆಲಸಕ್ಕೆ ಯಾರೂ ಮುಂದಾಗಬಾರದು ಎಂದು ಸು?ಂಗ ಆಸ್ಪತ್ರೆ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಎಚ್ಚರಿಸಿದರು.
ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ನಗರದ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆ?ಂರ್ ಅವರು ಜಾರಿಗೆ ತಂದ ಮೀಸಲಾತಿಗೆ 106ರ ಸಂಭ್ರಮಾಚರಣೆ ಮತ್ತು ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ 14ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೆಲವು ರಾಜಕಾರಣಿಗಳು ಹಣ ಮಾಡಲು ಅಧಿಕಾರಿಕ್ಕೆ ಪಡೆಯುತ್ತಿದ್ದಾರೆ. ಅಧಿಕಾರಕ್ಕೆ ಪಡೆಯಲು ಜಾತಿಯನ್ನು ಬಳಸಿಕೊಳ್ಳುತ್ತಿದ್ದಾರೆ. ಹಣ ಮತ್ತು ಅಧಿಕಾರ ಪಡೆಯುವ ಉದ್ದೇಶದಿಂದ ಜಾತಿ ಹೆಸರಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಅನೇಕ ಮಹನೀಯರು ಹೋರಾಟ ಮಾಡಿದರು. ಆದರೂ ಜಾತಿಯನ್ನು ತೊಲಗಿಸಲು ಸಾಧ್ಯವಾಗಲಿಲ್ಲ. ಆದರೆ ಪ್ರತಿಯೊಬ್ಬರೂ ಸಹಾ ಜಾತಿಯ ಹೆಸರಿನಲ್ಲಿ ಭೇದಭಾವ ಮಾಡುವುದನ್ನು ಬಿಡಬೇಕು. ಜಾತಿಯ ಹೆಸರಿನಲ್ಲಿ ನಡೆಯುವ ವೈಷಮ್ಯ, ಸಂಘರ್ಷಗಳು ನಿಲ್ಲಬೇಕು ಎಂದು ತಿಳಿಸಿದರು.
ಸಮಾಜದಲ್ಲಿ ಮೇಲು-ಕೀಳು ಎಂಬ ಭಾವೆನೆ ಬೇರೂರಿತ್ತು. ಕೆಳವರ್ಗದವರಿಗೆ ಉದ್ಯೋಗ ಮತ್ತಿತರ ಕಡೆಗಳಲ್ಲಿ ಉತ್ತಮ ಸ್ಥಾನಮಾನಗಳು ಸಿಗುತ್ತಿರಲಿಲ್ಲ. ಶಿಕ್ಷಣ ಪಡೆಯುವುದಕ್ಕೂ ಅವಕಾಶವಿರಲಿಲ್ಲ. ಆದ್ದರಿಂದ ತಳಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಮಾನ ಸ್ಥಾನಮಾನ ಕಲ್ಪಿಸಿಕೊಡುವ ಉದ್ದೇಶದಿಂದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆ?ಂರ್ ಅವರು ಮೀಸಲಾತಿಯನ್ನು ಜಾರಿಗೆ ತಂದರು ಎಂದು ತಿಳಿಸಿದರು.
ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ಮನೆಗಳನ್ನು ಯಾರು ಬೇಕಾದರೂ ಕಟ್ಟಬಹುದು. ಆದರೆ ಇಂದು ಮನಸ್ಸನ್ನು ಕಟ್ಟಬೇಕಾದ ಅಗತ್ಯವಿದೆ. ಈ ಕಾರ್ಯವನ್ನು ಸಂಘಟನೆಗಳು ವಾಡಬೇಕು ಎಂದು ಸಲಹೆ ನೀಡಿದರು.
ಕೃಷಿ ವಿಜ್ಞಾನಿ ಡಾ.ವಸಂತ ಕುಮಾರ್ ತಿಮಕಾಪುರ ಅವರಿಗೆ `ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ ಹಾಗೂ ಪೆÇ್ರ.ವಸಂತಮ್ಮ (ಶಿಕ್ಷಣ ಕ್ಷೇತ್ರ), ಡಾ.ಸುಜಾತ ಅಕ್ಕಿ, ಕೆರೋಡಿ ಲೋಲಾಕ್ಷಿ(ಸಾಹಿತ್ಯ ಕ್ಷೇತ್ರ), ಅಂಬಿಕ ಎನ್.ಮಸಗಿ(ಕ್ರೀಡಾ ಕ್ಷೇತ್ರ) ಮತ್ತಿತರರಿಗೆ ಪದ್ಮಭೂಷಣ ಯಶೋಧರಮ್ಮ ದಾಸಪ್ಪ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕುಣಿಗಲ್ ಅರೆಶಂಕರ ಮಠದ ಶ್ರೀ ಸಿದ್ದರಾಮ ಚೈತನ್ಯ ಸ್ವಾಮೀಜಿ, ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ಅಧ್ಯಕ್ಷ ಎಚ್.ಎಲ್.ಯಮುನಾ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.