ಜಿಲ್ಲಾ ಕಾಂಗ್ರೆಸ್‍ನಿಂದ ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ ಹುಟ್ಟುಹಬ್ಬ ಆಚರಣೆ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.23:-
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾಡಾ ಅಧ್ಯಕ್ಷರಾಗಿರುವ ಪಿ. ಮರಿಸ್ವಾಮಿ ಅವರು 65ನೇ ವರ್ಷದ ಹುಟ್ಟುಹಬ್ಬವನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಣೆ ಮಾಡಲಾಯಿತು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್ ಸಮಿತಿ, ಎನ್‍ಎಸ್‍ಐಯು ಹಾಗೂ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ಮುಖಂಡರು ಪಿ. ಮರಿಸ್ವಾಮಿ ಅವರಿಗೆ ಮೈಸೂರು ಪೇಟಾ ತೊಡಿಸಿ, ಭಾರಿ ಗಾತ್ರದ ಹಾರ ಹಾಕಿ ಕೇಕ್ ಕತ್ತರಿಸುವ ಮೂಲಕ 65ನೇ ವರ್ಷದ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿ, ಪಿ.ಮರಿಸ್ವಾಮಿ, ನನ್ನ ಹುಟ್ಟುಹಬ್ಬವನ್ನು ಕಾಂಗ್ರೆಸ್ ಕಚೇರಿಯಲ್ಲಿ ಎಲ್ಲರು ಒಗ್ಗಟ್ಟಿನಿಂದ ಆಚರಣೆ ಮಾಡುತ್ತಿರುವುದು ಸಂತಸ ತಂದಿದೆ. ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗು ಕಾಂಗ್ರೆಸ್ ಪಕ್ಷದ ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ, ಮುಖಂಡರಿಗೆ ಆಭಾರಿಯಾಗಿದ್ದೇನೆ. ನಿಮ್ಮೆಲ್ಲರ ಶ್ರಮ ಮತ್ತು ಸಹಕಾರದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಸದೃಢವಾಗಿ ಸಂಘಟನೆಗೊಂಡಿದೆ. ಮುಂದಿನ ದಿನಗಳಲ್ಲಿ ಎಲ್ಲರು ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷವನ್ನು ಪ್ರಬಲವಾಗಿ ಸಂಘಟಿಸಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಶ್ರಮವಹಿಸೋಣ. ಮೊದಲು ಪಕ್ಷದ ನಂತರ ನಾವುಗಳು. ಪಕ್ಷದ ಬೆಳೆದರೆ ನಾವು ಬೆಳೆದಂತೆ. ಹೀಗಾಗಿ ಎಲ್ಲರು ಕಾಂಗ್ರೆಸ್ ಸಂಘಟನೆಗೆ ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಪಿ. ಸದಾಶಿವಮೂರ್ತಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಬ್ಲಾಕ್ ಅಧ್ಯಕ್ಷ ಮಹಮದ್ ಅಸ್ಗರ್, ತೋಟೇಶ್, ಹೊಂಗನೂರು ಚಂದ್ರು, ತಾ.ಪಂ. ಮಾಜಿ ಸದಸ್ಯ ಪಿ. ಕುಮಾರನಾಯಕ್, ನಾಗವಳ್ಳಿ ನಾಗಯ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಸ್.ನಾಗರತ್ನ ಕೆಂಗಾಕಿ, ನಗರಸಭಾ ಸದಸ್ಯೆ ಚಿನ್ನಮ್ಮ, ನಾಗಶ್ರೀ, ಎ.ಎಚ್.ಎನ್.ಖಾನ್, ಕರಿನಂಜನಪುರ ಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಕೆಲ್ಲಂಬಳ್ಳಿ ನಾಗೇಂದ್ರ, ರಾಜೇಶ್‍ಗೌಡಹಳ್ಳಿ, ಕರಿನಂಜನಪುರಸ್ವಾಮಿ, ನಾಗವಳ್ಳಿ ನಾಗಯ್ಯ, ನಾಗು ಮೋಹನ್, ಅರುಣ್‍ಕುಮಾರ್, ಹೊಂಗನೂರು ಜಯರಾಜ್, ಬೂದಂಬಳ್ಳಿ ಶಂಕರ್ ಮೊದಲಾದವರು ಇದ್ದರು.