
ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ. ನ.14 ವಿಜಯನಗರ ಜಿಲ್ಲೆ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸದಸ್ಯರಾಗಿ ಸಿ.ಶಿವಾನಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದ್ದರಿಂದ
ತಾಲೂಕ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನದಲ್ಲಿ ಸಿ ಶಿವನಂದ ಇವರಿಗೆ ಅಭಿನಂದನೆ ಮತ್ತು ಸನ್ಮಾನ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಉಮಾಪತಿ ಶೆಟ್ಟರ್, ಬುಡ್ಡಿ ಬಸವರಾಜ್, ವಿಶ್ವನಾಥ್ ಬಾವಿಕಟ್ಟಿ, ರಾಜಾವಲಿ ಗಡ್ಡದ್ ಉಪಸ್ಥಿತರಿದ್ದರು.

























