ಜಿ-7 ಶೃಂಗ ಸಭೆ: ಮೋದಿಯಿಂದ ಜಾಗತಿಕ ನಾಯಕರ ಭೇಟಿ

ಕ್ಯಾಲ್ಗರಿ ,( ಕೆನಡಾ) ಜೂ.17- ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮತ್ತು ಪಾಕಿಸ್ತಾನದ ಪ್ರಾಯೋಜಿತ ಭಯೋತ್ಪಾದನೆ ಕುರಿತು ಬಹು ಪಕ್ಷಗಳ ನಿಯೋಗಗಳ ಮೂಲಕ ಜಗತ್ತಿನ ವಿವಿಧ ದೇಶಗಳಿಗೆ ಮನವರಿಕೆ ಮಾಡಿಕೊಟ್ಟ ನಂತರ ಪ್ರಧಾನಿ ನರೇಂದ್ರ ಮೋದಿ ಜಾಗತಿಕ ನಾಯಕರನ್ನು ಭೇಟಿ ಮಹತ್ವ ಪಡೆದುಕೊಂಡಿದೆ.

“ಶೃಂಗಸಭೆಯಲ್ಲಿ, ಪ್ರಧಾನ ಮಂತ್ರಿಯವರು ಜಿ -7 ದೇಶಗಳ ನಾಯಕರು, ಆಹ್ವಾನಿತ ರಾಷ್ಟ್ರಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಇಂಧನ ಭದ್ರತೆ, ತಂತ್ರಜ್ಞಾನ ಮತ್ತು ನಾವೀನ್ಯತೆ, ವಿಶೇಷವಾಗಿ ಕೃತಕ ಬುದ್ದಿಮತ್ತೆ ,ಭಯೋತ್ಪಾದನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರ ಆಹ್ವಾನದ ಮೇರೆಗೆ ಜಿ-7 ಶೃಂಗದಲ್ಲಿ ಭಾಗಿಯಾಗಲು ಕೆನಡಾಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆ ವಿರುದ್ಧ ಹೋರಾಟ ಸೇರಿದಂತೆ ಹಲವು ಜಾಗತಿಕ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಮೊದಲ ಬಾರಿಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ಮು ಭೇಟಿ ಮಾಡುತ್ತಿದ್ದು ಈ ವೇಳೆ ಭಯೋತ್ಪಾದನೆ ನಿಗ್ರಹ, ಜಾಗತಿಕ ಪಿಡುಗಾಗಿರುವ ಉಗ್ರರರ ಉಪಟಳ ನಿರ್ಮೂಲನೆ ಸೇರಿದಂತೆ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಇದೇ ವೇಳೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಮತ್ತು ಜಿ- 7 ದೇಶಗಳ ನಾಯಕರು ಮತ್ತು ಶೃಂಗ ಸಭೆಯಲ್ಲಿ ಪಾಲ್ಗೊಳ್ಳುವ ವಿವಿಧ ದೇಶಗಳ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.

ಭಯೋತ್ಪಾದನಾ ವಿರೋಧಿ ಕ್ರಮಗಳ ಕುರಿತು ಜಾಗತಿಕ ನಾಯಕರಿಗೆ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮತ್ತು ಭಯೋತ್ಪಾದಕ ಸಂಘಟನೆಗಳಿಗೆ ಆಶ್ರಯ ನೀಡುವಲ್ಲಿ ಪಾಕಿಸ್ತಾನದ ಕೈವಾಡದ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಕೆನಡಾದೊಂದಿಗೆ ಭೇಟಿ

ಖಲಿಸ್ತಾನ ಪ್ರತ್ಯೇಕತಾವಾದಿ ನಾಯಕನ ಹತ್ಯೆ ವಿಷಯಕ್ಕೆ ಸಂಬಂಧಿಸಿದಂತೆ ಭಾರತ- ಕೆನಡಾ ನಡುವೆ ಸಂಬಂದ ಹದಗೆಟ್ಡೆ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅವರನ್ನು ಭೇಟಿ ಮಾಡುತ್ತಿದ್ದು ಈ ಭೇಟಿಯೂ ಮಹತ್ವ ಪಡೆದುಕೊಂಡಿದೆ.

2015 ರ ನಂತರ. ಪ್ರಧಾನಿ ನರೇಂದ್ರ ಮೋದಿ ಕೆನಡಾಕ್ಕೆ ನೀಡಿದ ಮೊದಲ ಭೇಟಿ ಇದಾಗಿದ್ದು, ಜಸ್ಟಿನ್ ಟ್ರುಡೊ ಅವರನ್ನು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳಿಸಿದ ನಂತರದ ಮೊದಲ ಭೇಟಿ ಇದಾಗಿದೆ.

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಸರ್ಕಾರಿ ಏಜೆಂಟರ ಪಾತ್ರವಿದೆ ಎಂದು ಟ್ರುಡೊ ಆರೋಪಿಸಿದ ನಂತರ ಕೆನಡಾ ಮತ್ತು ಭಾರತ ಸಂಬಂದ ಹದಗೆಟ್ಟಿತ್ತು

ಹೊಸದಾಗಿ ಮಾರ್ಕ್ ಕಾರ್ನಿ ಅವರು ಪ್ರಧಾನಿಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯಿಂದ ಉಭಯ ದೇಶಗಳ ರಾಜತಾಂತ್ರಿಕ ಸಂಬಂಧಗಳನ್ನು ಮರುಪರಿಶೀಲಿಸಬಹುದು ಎಂದು ಹೇಳಲಾಗಿದೆ.