
ಸಂಜೆವಾಣಿ ವಾರ್ತೆ
ಹೊಸಪೇಟೆ.ಜು.5 ಹೈಕೋರ್ಟಿನ ನ್ಯಾಯಾಧೀಶರು ಹಾಗೂ ವಿಜಯನಗರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ಪ್ರದೀಪ್ ಸಿಂಗ್ ಹೇರೂರು ಅವರು ಇದೇ ಜು.18 ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿಜಯನಗರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಗುಜ್ಜಲ ನಾಗರಾಜ ತಿಳಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಹೈಕೋರ್ಟಿನ ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ವಿಜಯನಗರ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಪ್ರದೀಪ್ ಸಿಂಗ್ ಹೇರೂರು ಅವರನ್ನು ಭೇಟಿ ಮಾಡಿ, ನಗರದಲ್ಲಿ ನೂತನ ಜಿಲ್ಲಾ ನ್ಯಾಯಾಂಗ ಸಂಕೀರ್ಣ ನಿರ್ಮಾಣ ಸೇರಿದಂತೆ ಇನ್ನಿತರ ಸೌಲಭ್ಯಗಳ ಕುರಿತು ಅವರೊಂದಿಗೆ ಚರ್ಚೆ ನಡೆಸಿದ್ದು. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ನ್ಯಾಯಾಂಗ ಇಲಾಖೆಗೆ ಕಾಯ್ದಿರಿಸಿದ 9.88 ಎಕರೆ ಪ್ರದೇಶದಲ್ಲಿ 130 ಕೋಟಿ ರೂ ವೆಚ್ಚದಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಯೋಜನೆಗೆ ಸಿದ್ದವಾಗಿದ್ದು. ಈ ಕುರಿತು ಆಡಳಿತಾತ್ಮಕ ಅನುಮೋದನೆ ನೀಡಬೇಕಾಗಿದೆ.
ಈ ಕುರಿತಂತೆ ಹೈಕೋರ್ಟಿನ ನ್ಯಾಯಾಧೀಶರು ಹಾಗೂ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ಪ್ರದೀಪ್ ಸಿಂಗ್ ಹೇರೂರು ಅವರು ಜು.18 ರಂದು ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಗೆ ಭೇಟಿ ನೀಡಲಿದ್ದು. ಅಂದು ಜಿಲ್ಲಾ ನ್ಯಾಯಾಯ ಸಂಕಿರ್ಣದ ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎಂದು ಗುಜ್ಜಲ ನಾಗರಾಜ ತಿಳಿಸಿದ್ದಾರೆ.




























