Home ಜಿಲ್ಲೆ ಜೂ.25 ರಂದು ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟುಗಳ ಲೋಕಾರ್ಪಣೆ ಸಮಾರಂಭದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು...

ಜೂ.25 ರಂದು ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟುಗಳ ಲೋಕಾರ್ಪಣೆ ಸಮಾರಂಭದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿ

ಸಂಜೆವಾಣಿ ವಾರ್ತೆ

ಹೊಸಪೇಟೆ.ಜೂ.16 ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಸೇರಿದಂತೆ ಮೂರು ರಾಜ್ಯಗಳ 8 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟುಗಳ ಲೋಕಾರ್ಪಣೆ ಕಾರ್ಯ ಇದೇ ಜೂ.25 ರಂದು ಜರುಗಲಿದೆ.

ಸ್ಥಳೀಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಈ ವಿಷಯ ತಿಳಿಸಿದರು. ತುಂಗಭದ್ರಾ ಜಲಾಶಯಕ್ಕೆ ನೂತನ ಕ್ರಸ್ಟ್ ಗೇಟುಗಳ ಆಳವಡಿಕೆ ಕಾರ್ಯ ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಂಡಿದ್ದು. ಹೊಸ ಚೈನ್ ಅಳವಡಿಕೆ ಕಾರ್ಯ ಈಗಾಗಲೇ ಕೊನೆಯ ಹಂತಕ್ಕೆ ತಲುಪಿದ್ದು. ಈ ಹಿನ್ನಲೆಯಲ್ಲಿ ಜೂ.25 ರಂದು ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟುಗಳ ಲೋಕಾರ್ಪಣೆ ಸಮಾರಂಭವನ್ನು  ಕರ್ನಾಟಕ ನೀರಾವರಿ ನಿಗಮದ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜೂ.25 ರಂದು ಜರುಗಲಿರುವ ನೂತನ ಕ್ರಸ್ಟ್ ಗೇಟುಗಳ ಲೋಕಾರ್ಪಣೆ ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ, ಕೇಂದ್ರ ಸರ್ಕಾರದ ನೀರಾವರಿ ಸಚಿವರು ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ. ನೂತನ ಕ್ರಸ್ಟ್ ಗೇಟುಗಳ ಲೋಕಾರ್ಪಣೆ ನಂತರ ಮುನಿರಾಬಾದ್ ನ ಶಾಲಾ ಆವರಣದಲ್ಲಿ ಬೃಹತ್ ಸಮಾರಂಭ ಜರುಗಲಿದೆ. ಅದಕ್ಕಾಗಿ ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದು ಡಿಸಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ನೂತನ ಕ್ರಸ್ಟ್ ಗೇಟುಗಳ ಲೋಕಾರ್ಪಣೆ ಸಮಾರಂಭವನ್ನು ಅದ್ದೂರಿಯಾಗಿ ಮತ್ತು ಅಚ್ಚುಕಟ್ಟಾಗಿ ಆಯೋಜಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಇತ್ತೀಚೆಗೆ ಬೆಂಗಳೂರಿನಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿಇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಟ್ಟುನಿಟ್ಟಿನ ಆದೇಶ ನೀಡಿದ್ದು. ಒಟ್ಟಾರೆಯಾಗಿ ಸಮಾರಂಭವನ್ನು ಸ್ಮರಣೀಯವಾಗಿಸಲು ಸಿಎಂ ಸೂಚನೆ ನೀಡಿದ್ದಾರೆ. ಸಮಾರಂಭದಲ್ಲಿ ವಿಜಯನಗರ, ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ರೈತ ಮುಖಂಡರು, ರೈತರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ಡಿಸಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟುಗಳ ಲೋಕಾರ್ಪಣೆ ಸಮಾರಂಭ ಜೂ.25 ರಂದು ಅದ್ದೂರಿಯಾಗಿ ಜರುಗಲಿದೆ. ಸಮಾರಂಭದಲ್ಲಿ ಕರ್ನಾಟಕ ಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಅದಕ್ಕಾಗಿ ಸಿದ್ದತಾ ಕಾರ್ಯಗಳು ಭರದಿಂದ ನಡೆಯುತ್ತಿವೆ.

ಕವಿತಾ ಎಸ್.ಮನ್ನಿಕೇರಿ

ಜಿಲ್ಲಾಧಿಕಾರಿಗಳು,

ವಿಜಯನಗರ.