Home ಜಿಲ್ಲೆ ಮೈಸೂರು ಜೆಎಸ್‍ಎಸ್ ನರ್ಸಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

ಜೆಎಸ್‍ಎಸ್ ನರ್ಸಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

ಸಂಜೆವಾಣಿ ನ್ಯೂಸ್
ಮೈಸೂರು: ಸೆ.09:-
ಜೆಎಸ್‍ಎಸ್ ಮಹಾವಿದ್ಯಾಪೀಠ, ಜೆಎಸ್‍ಎಸ್ ಕಾಲೇಜ್ ಆಫ್ ನರ್ಸಿಂಗ್ ವತಿಯಿಂದ ನಗರದ ಶ್ರೀ ರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಬಿ.ಎಸ್ಸಿ ನರ್ಸಿಂಗ್, ಪಿ.ಬಿ.ಬಿ.ಎಸ್ಸಿ ನರ್ಸಿಂಗ್ ಹಾಗೂ ಎಂ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.
ಮಾತನಾಡಿದ ಮುಖ್ಯ ಅತಿಥಿಗಳು, ನರ್ಸಿಂಗ್ ಅತ್ಯುನ್ನತ ಸೇವಾ ಕ್ಷೇತ್ರವಾಗಿದ್ದು, ದೇಶ-ವಿದೇಶಗಳಲ್ಲಿ ಅಪಾರ ಬೇಡಿಕೆಯಿದೆ. ವಿದ್ಯಾರ್ಥಿಗಳು ಸೇವಾ ಮನೋಭಾವದಿಂದ ಈ ಕ್ಷೇತ್ರವನ್ನು ಉಜ್ವಲಗೊಳಿಸಬೇಕು ಎಂದು ಕರೆ ನೀಡಿದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಸಿ.ಜಿ. ಬೆಟಸೂರು ಮಠ ಅವರು, ಮಾನವೀಯತೆ ಮತ್ತು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿ ನಿಮ್ಮ ಭವಿಷ್ಯ ಉಜ್ವಲವಾಗಿಸಿಕೊಳ್ಳಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸ್ಟೇಟ್ ನರ್ಸಿಂಗ್ ಕೌನ್ಸಿಲ್ ಬೆಂಗಳೂರಿನ ಶ್ರೀಕಾಂತ್ ಪೂಜಾರಿ ಹಾಗೂ ಗೌರವಾನ್ವಿತ ಅತಿಥಿಗಳಾಗಿ ಜೆಎಸ್‍ಎಸ್ ಮಹಾವಿದ್ಯಾಪೀಠದ ವೈದ್ಯಕೀಯ ಶಿಕ್ಷಣ ವಿಭಾಗದ ನಿರ್ದೇಶಕರಾದ ಆರ್. ಮಹೇಶ್ ಮತ್ತು ಜೆಎಸ್‍ಎಸ್ ಆಸ್ಪತ್ರೆಯ ನಿರ್ದೇಶಕರಾದ ಡಾ. ಸಿ.ಪಿ. ಮಧು ಭಾಗವಹಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿಗಳಾದ ಡಾ. ಸಿ.ಜಿ. ಬೆಟಸೂರು ಮಠ ಅವರು ವಹಿಸಿದ್ದರು.
ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪೆÇ್ರ. ಅಶ್ವತಿ ದೇವಿ, ಬೋಧಕ ವರ್ಗ, 99 ಪದವೀಧರ ವಿದ್ಯಾರ್ಥಿಗಳು ಹಾಗೂ ಪೆÇೀಷಕರು ಉಪಸ್ಥಿತರಿದ್ದರು.