
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಮಾ.15: ಬೀದರ್ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾನಿಲಯದಲ್ಲಿ ಜಲಕೃಷಿ ಮತ್ತು ಮೀನುಗಾರಿಕೆ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡಿದ ತಾಲೂಕಿನ ಜೈನಹಳ್ಳಿಯ ಶಿವಶಂಕರ್ ಮತ್ತು ಕಲ್ಪನ ದಂಪತಿ ಪುತ್ರ ಜೆ.ಎಸ್.ನಿತಿನ್ ಜಲಕೃಷಿ ಮತ್ತು ಮೀನುಗಾರಿಕೆ ವಿಜ್ಞಾನ ವಿಷಯದಲ್ಲಿ ಚಿನ್ನದ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಕಳೆದ ಫೆ.27ರಂದು ಬೀದರ್ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ಜೆ.ಎಸ್.ನಿತಿನ್ ಅವರಿಗೆ ಪದವಿ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದರು.
ರಾಜ್ಯ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಸೇರಿದಂತೆ ಹಲವು ಗಣ್ಯರಿದ್ದರು.






























