
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ.26: ಜಿಲ್ಲೆಯ ಸಂಡೂರು ತಾಲೂಕಿನ ಜೈಸಿಂಗ್ ಪುರ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ಮೈನ್ಸ್ ಲಾರಿ ಮತ್ತು ಕಾರು ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿ ಓರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಸಂಡೂರು ತಾಲೂಕಿನ ಲಕ್ಚ್ಮೀಪುರದಿಂದ.ಆಸ್ಪತ್ರೆಗೆಂದು ಹೊಸಪೇಟೆಗೆ ನಂದೀಶ್ ಮತ್ತವರ ಕುಟುಂಬ ಹೊರಟಿತ್ತು ಬೆಳಿಗ್ಗೆ 10 ಗಂಟೆ ಸುಮಾರಿಗೆ ಹೊಸಪೇಟೆ ಕಡೆಯಿಂದ ಬಂದ ಮೈನ್ಸ್ ಸಾಗಾಣೆಯ ಟಿಪ್ಪರ್ ಲಾರಿ
ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿಹೊಡೆದಿದೆ.
ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ಜಯಲಕ್ಷ್ಮಿ(21) ಆಶಾ (28) ಮಕ್ಕಳಾದ ಸ್ವಾತಿ (05) ಮತ್ತು ಬಿಂದುಶ್ರೀ (04) ಕಾರಿನಲ್ಲಿಯೇ ಸಾವನ್ನಪ್ಪಿದ್ದಾರೆ.
ಕಾರು ಚಲಾಯಿಸುತ್ತಿದ್ದ ನಂದೀಶ್ (29) ಮಹಾಲಕ್ಷ್ಮಿ (03) ರಮೇಶ್ ತೀವ್ರವಾಗಿ ಗಾಯಗೊಂಡಿದ್ದು ಇವರನ್ನು ಕೊಪ್ಪಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರನ್ನು ಹುಬ್ಬಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಬಗ್ಗೆ ಸಂಡೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.
