
ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ `ಟೈಮ್ ಪಾಸ್’ ಫಸ್ಟ್ ಲುಕ್ ಪೋಸ್ಟರ್ ಮೂಲಕ ಒಂದಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗಷ್ಟೇ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.
ಅದರ ಬಗ್ಗೆಯೂ ಇದೀಗ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಮೂಡಿಸಿರುವ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ. ಇದೇ ಅಕ್ಟೋಬರ್ 17ರಂದು ಟೈಮ್ ಪಾಸ್ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಈ ಟೀಸರ್ನಲ್ಲಿ ಈವತ್ತಿನ ಸಮಾಜಕ್ಕೆ ಕನ್ನಡಿ ಹಿಡಿದಂತಿರುವ ಕಥೆಯೊಂದರ ಸುಳಿವುಗಳು ಗೋಚರವಾಗುತ್ತವೆ. ಮನೋರಂಜನೆಯನ್ನೇ ಮುಖ್ಯ ಬಿಂದುವಾಗಿಸಿಕೊಂಡು ಈ ಸಿನಿಮಾವನ್ನು ರೂಪಿಸಿರೋದಾಗಿ ನಿರ್ದೇಶಕರು ಈ ಹಿಂದೆ ಹೇಳಿಕೊಂಡಿದ್ದರು. ಅಂಥಾ ಒಂದಷ್ಟು ಸುಳಿವುಗಳು ಈ ಟೀಸರ್ನಲ್ಲಿ ಕಾಣಿಸಿವೆ. ಇದು ಚೇತನ್ ಜೋಡಿದಾರ್ ನಿರ್ದೇಶನದ ಚೊಚ್ಚಲ ಸಿನಿಮಾ. ಈವರೆಗೂ ಯಾವ ನಿರ್ದೇಶಕರ ಬಳಿಯೂ ಕೆಲಸ ಮಾಡಿದ ಅನುಭವ ಇಲ್ಲದಿದ್ದರೂ ಕೂಡಾ, ಸಿನಿಮಾ ಪ್ರೇಮದಿಂದ ಎಲ್ಲವನ್ನೂ ಸ್ವತಃ ಕಲಿತುಕೊಂಡು ಚೇತನ್ ಜೋಡಿದಾರ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರಂತೆ.
ಆಡಿಯೋ ಹಕ್ಕುಗಳನ್ನು ಪ್ರತಿಷ್ಠಿತ ಆಡಿಯೋ ಸಂಸ್ಥೆಯಾದ ಸರೆಗಮ ಕನ್ನಡ ಸಂಸ್ಥೆ ಟೈಮ್ ಪಾಸ್ ಚಿತ್ರದ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿದೆ. ಅದರ ಯೂ ಯೂಟ್ಯೂಬ್ ಚಾನೆಲ್ಲಿನಲ್ಲಿ ಹಾಡುಗಳು ಬಿಡುಗಡೆಗೊಂಡಿವೆ.
ಡಾರ್ಕ್ ಹ್ಯೂಮರ್ ಜಾನರಿಗೆ ಸೇರಿಕೊಳ್ಳುವ ಈ ಚಿತ್ರವನ್ನು ಶ್ರೀ ಚೇತನ ಸರ್ವಿಸಸ್ ಬ್ಯಾನರ್ ಮೂಲಕ ಗುಂಡೂರು ಶೇಖರ್, ಕಿರಣ್ ಕುಮಾರ್ ಶೆಟ್ಟಿ ಎಂ.ಹೆಚ್ ಕೃಷ್ಣಮೂರ್ತಿ ನಿರ್ಮಾಣ ಮಾಡಿದ್ದಾರೆ. ಇಮ್ರಾನ್ ಪಾಷಾ, ವೈಸಿರಿ ಕೆ ಗೌಡ, ರತ್ಷಾರಾಮ್, ಕೆ. ಚೇತನ್ ಜೋಡಿದಾರ್, ಓಂ ಶ್ರೀ ಯಕ್ಷಶಿಫ್, ಪ್ರಭಾಕರ್ ರಾವ್, ನವೀನ್ ಕುಮಾರ್, ಸಂಪತ್ ಕುಮಾರ್, ಅಶ್ವಿನಿ ಶ್ರೀನಿವಾಸ್ ಮುಖ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಗಿರೀಶ್ ಗೌಡ ಸಾಹಸ ನಿರ್ದೇಶನ, ವೈಷ್ಣವಿ ಸತ್ಯನಾರಾಯಣ್ ನೃತ್ಯ ನಿರ್ದೇಶನ, ರಾಜೀವ್ ಗಣೇಶ್ ಛಾಯಾಗ್ರಹಣ, ಮಣಿ ಪ್ರಚಾರ ಕಲೆ, ಡಿ. ಶಾಮಸುಂದರ್, ಬಿ.ಕೆ ದಯಾನಂದ ನಿರ್ಮಾಣ ನಿರ್ವಹಣೆ, ಹರಿ ಪರಮ್ ಸಂಕಲನ, ಡಿ.ಎಂ ಉದಯ ಕುಮಾರ್ (ಡಿಕೆ) ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.