ಸುಳ್ಯ:ಟ್ಯಾಂಕರ್ ಚಲಾಯಿಸುತ್ತಿರುವ ವೇಳೆ ಹೃದಯಾಘಾತಕ್ಕೆ ಒಳಗಾದ ಚಾಲಕ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ಗುರುವಾರ ನಡೆದಿದೆ.
ಬೆಳ್ಳಾರೆ ಗ್ರಾಮದ ಕಲ್ಲೋಣಿ ಚೀಮುಳ್ಳು ಟ್ಯಾಂಕರ್ ಚಾಲಕ ಜನಾರ್ಧನ ಗೌಡ (೪) ಅವರು ಹಲವು ವರ್ಷಗಳಿಂದ ಟ್ಯಾಂಕರ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗುರುವಾರ ಚಾಮರಾಜನಗರದಲ್ಲಿ ಟ್ಯಾಂಕರ್ ಚಲಾಯಿಸುತ್ತಿರುವಾಗ ಎದೆ ನೋವು ಕಾಣಿಸಿಕೊಂಡು ಹಠತ್ತಾಗಿ ಹೃದಯಾಘಾತ ಸಂಭವಿಸಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.




























