
ಪುತ್ತೂರು; ಅ.೨೦ರಂದು ಪುತ್ತೂರಿನ ಉಪ್ಪಳಿಗೆಯ ದೀಪೋತ್ಸವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕೋಮುಭಾಷಣ ಹಾಗೂ ಮಹಿಳೆಯರ ಬಗ್ಗೆ ಅವಮಾನಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಕೊನೆಗೂ ೫ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕಳೆದ ಒಂದು ತಿಂಗಳ ಅವಧಿಯಿಂದ ಜಾಮೀನು ದೊರಕದ ಈ ಪ್ರಕರಣದಲ್ಲಿ ಇಂದು ನ್ಯಾಯಾಲಯ ಜಾಮೀನು ನೀಡಿದೆ. ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ಪರವಾಗಿ ಖ್ಯಾತ ವಕೀಲ ಮಹೇಶ್ ಕಜೆ ಅವರು ವಾದಿಸಿದರು.



























