ಡಿ. ೩ ರಿಂದ ೫ ರ ವರೆಗೆ ಪಂಜ ಗರಡಿಬೈಲು ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶ

ಸುಳ್ಯ:ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶ ಡಿ. ೩, ೪ ಮತ್ತು ೫ ರಂದು ನಡೆಯಲಿದೆ.
ಡಿ.೦೩ ರಂದು ಪೂರ್ವಾಹ್ನ ಗಂಟೆ ೮ ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹವಾಚನ, ಮಹಾಗಣಪತಿ ಹೋಮ, ಮೃತ್ಯುಂಜಯ ಹೋಮ, ಆಶ್ಲೇಷ ಬಲಿ, ಮಧ್ಯಾಹ್ನ ಗಂಟೆ ೧೨ ರಿಂದ ಹೋಮದ ಪೂರ್ಣಾಹುತಿ, ಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ. ಸಂಜೆ ಗಂಟೆ ೫:೩೦ರಿಂದ ದುರ್ಗಾಪೂಜೆ, ಸುದರ್ಶನ ಹೋಮ, ಅಘೋರ ಹೋಮ, ವನದುರ್ಗಾ ಹೋಮ, ರಾತ್ರಿ ಗಂಟೆ ೮:೩೦ರಿಂದ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ.
ಡಿ.೦೪ ರಂದು ಸಂಜೆ ಗಂಟೆ ೫:೩೦ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ದಿ, ರಕ್ಷೆಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಪ್ರಾಕಾರ ಬಲಿ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ. ಡಿ. ೦೫ರಂದು ಪೂರ್ವಾಹ್ನ ಗಂಟೆ ೭:೩೦ರಿಂದ : ಮಹಾಗಣಪತಿ ಹೋಮ, ಮಕರ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ತಂಬಿಲ ಸೇವೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ ಎಂದು ಪಂಜ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು ಮತ್ತು ದೈವಸ್ಥಾನ ಜೀರ್ಣೋದ್ದಾರೆ ಸಮಿತಿ ಅಧ್ಯಕ್ಷ ಪರಮೇಶ್ವರ ಬಿಳಿಮಲೆ ತಿಳಿಸಿದ್ದಾರೆ.