Home ಜಿಲ್ಲೆ ತಾಲೂಕು ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಸನ್ನದ್ಧರಾಗಿ : ಮೀನಳ್ಳಿ ತಾಯಣ್ಣ

ತಾಲೂಕು ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಸನ್ನದ್ಧರಾಗಿ : ಮೀನಳ್ಳಿ ತಾಯಣ್ಣ

(ಸಂಜೆವಾಣಿ ವಾರ್ತೆ)

ಬಳ್ಳಾರಿ:ಜೂ,1- ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು, ಪಕ್ಷವನ್ನು ಮತ್ತಷ್ಟು ತಳಮಟ್ಟದಿಂದ ಸಂಘಟಿಸಿ ಎಲ್ಲರೂ ಸೇರಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂದು ಪಕ್ಷದ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಕಾರ್ಯಕರ್ತರಿಗೆ ಕರೆ ನೀಡಿದರು.

ಅವರು ನಿನ್ನೆ ನಗರದ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಳ್ಳಾರಿ ಗ್ರಾಮಾಂತರ ಹಾಗೂ ನಗರ ಅಧ್ಯಕ್ಷರ ಹಾಗೂ ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷರ ನೇಮಕಾತಿ ಆದೇಶ ಪತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.

ವಿಸಿಟಿಂಗ್ ಕಾರ್ಡ್ ಅಧ್ಯಕ್ಷರು ನಮಗೆ ಬೇಡ, ಪಕ್ಷದ ತತ್ವ ಸಿದ್ಧಾಂತಗಳನ್ನು ಪಾಲಿಸುವ, ಪಕ್ಷದ ಬಲವರ್ಧನೆಗೆ ಪ್ರಾಮಾಣಿಕವಾಗಿ ಶ್ರಮಿಸಲು ಮುಂದಾಗಬೇಕು, ಬರುವ ದಿನಗಳಲ್ಲಿ ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರುವುದು ಶತ ಸಿದ್ಧ, ಮತ್ತೆ ನಮ್ಮ ಕುಮಾರಣ್ಣನವರೇ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಇದರಲ್ಲಿ ಅನುಮಾನವೇ ಬೇಡ, ಕಾರ್ಯಕರ್ತರು, ಪದಾಧಿಕಾರಿಗಳು ಪಕ್ಷದ ಸಂಘಟನೆಗೆ ಸನ್ನದ್ಧರಾಗಬೇಕು, ನಮ್ಮ ಪಕ್ಷ ಅಧಿಕಾರಕ್ಕೆ ಬರುವರೆಗೂ ಎಲ್ಲರೂ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಅಧ್ಯಕ್ಷರಾಗಿ ರಾಜಶೇಖರ್ ಗೌಡ, ಬಳ್ಳಾರಿ ಜಿಲ್ಲಾ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾಗಿ ಆರ್.ರಾಕೇಶ್ ಅವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಲ್ಲನಗೌಡ, ಉಪಾಧ್ಯಕ್ಷ ವಿಜಯಕುಮಾರ್ ಮದಿರೆ, ಚಾಗನೂರು ನಾಗರಾಜ್, ಬಸಪ್ಪ, ಅಶೋಕ ಸಂಗನಕಲ್ಲು, ವೀರೇಶ್, ಹೊನ್ನೂರು ಅಲಿ, ಜಮೀಲಾ, ಶಬಾನಾ, ರಹೆಮತ್, ಜಯಲಕ್ಷ್ಮೀ, ಶಮೀಮ್ ಬಾನು, ಲಕ್ಷ್ಮೀ ಸೇರಿದಂತೆ ವಿವಿಧ ಕಾರ್ಯಕರ್ತರು ಭಾಗವಹಿಸಿದ್ದರು.