
ಸುಳ್ಯ:ಶತಮಾನೋತ್ಸವ ಆಚರಿಸಿಕೊಂಡ ದೇವಚಳ್ಳ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬುಧವಾರ ಗುದ್ದಲಿಪೂಜೆ ನೆರವೇರಿಸಿದರು.
ಎಂಆರ್‌ಪಿಎಲ್ ನಿಧಿಯಿಂದ ನೂತನ ತರಗತಿ ಕೊಠಡಿ ನಿರ್ಮಾಣಕ್ಕೆ ರೂ. ೧೨.೫೦ ಲಕ್ಷ ಹಾಗೂ ರಾಜ್ಯ ಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರ ನಿಧಿಯಿಂದ ರೂ. ೫ ಲಕ್ಷ ಅನುದಾನದಲ್ಲಿ ನೂತನ ಕಟ್ಟಡ ನಿರ್ಮಾಣವಾಗಲಿದೆ.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಜಯಾನಂದ ಪಟ್ಟೆ ವಹಿಸಿದ್ದರು. ಶತಮಾನೋತ್ಸವ ಸಮಿತಿ ಅಧ್ಯಕ್ಷ ಎ. ವಿ. ತೀರ್ಥರಾಮ ಪ್ರಾಸ್ತಾವಿಕ ಮಾತನಾಡಿದರು. ವೇದಿಕೆಯಲ್ಲಿ ದೇವಚಳ್ಳ ಗ್ರಾ.ಪಂ. ಮಾಜಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಪ್ರಮುಖರಾದ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಸೊಸೈಟಿ ನಿರ್ದೇಶಕ ಕೃಷ್ಣಯ್ಯ ಮೂಲೆ ತೋಟ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಬಿ. ವಿ., ಎಸ್ ಡಿ ಎಂ ಸಿ ಉಪಾಧ್ಯಕ್ಷೆ ದಿವ್ಯ ಬಿ. ಎಲ್. ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಶ್ರೀಧರ ಗೌಡ ಕೆ. ಸ್ವಾಗತಿಸಿ, ಸಹ ಶಿಕ್ಷಕಿ ಹರಣಾಕ್ಷಿ ಪಿ. ಎ ವಂದಿಸಿದರು. ಶಿಕ್ಷಕ ಜೀವನ್ ಕುಮಾರ್ ಟಿ. ಕಾರ್ಯಕ್ರಮ ನಿರೂಪಿಸಿದರು.

























