
ಸುಳ್ಯ:ಮುರುಳ್ಯ ಗ್ರಾಮದ ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವದ ಅಂಗವಾಗಿ ಗುರುವಾರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.
ಕ್ಷೇತ್ರದ ತಂತ್ರಿಗಳಾದ ವೇ.ಮೂ. ನೀಲೇಶ್ವರ ಕೆ.ಯು.ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಗಳು ನಡೆಯಿತು. ಬೆಳಿಗ್ಗೆ ಗಣಪತಿ ಹವನ, ಬಿಂಬ ಶುದ್ದಿ, ಕಲಶಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಬಲಿ ಹೊರಡುವುದು, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಂಗಳಾರತಿ, ಮಂತ್ರಾಕ್ಷತೆ, ಸಂಪ್ರೋಕ್ಷಣೆ, ತೀರ್ಥಪ್ರಸಾದ, ಅನ್ನಸಂತರ್ಪಣೆ. ನಡೆಯಿತು. ಕ್ಷೇತ್ರದ ಆಡಳಿತ ಸಮಿತಿಯವರು, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

























