
ಮಂಗಳೂರು: ಸಹಕಾರ ಕ್ಷೇತ್ರ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನಿರಂತರವಾಗಿ ನೀಡುತ್ತಾ ಬಂದಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ, ಮಂಗಳೂರು ಇದರ ಅಧ್ಯಕ್ಷ ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ, ಮಂಗಳೂರು ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಇವರ ಸಂಯುಕ್ತ ಆಶ್ರಯ ದಲ್ಲಿ ಕೇಂದ್ರ ಬ್ಯಾಂಕ್ ಸಭಾಂಗಣದಲ್ಲಿ ಸೋಮ ವಾರ ಹಮ್ಮಿಕೊಂಡ ವಿಶೇಷ ಸಹಕಾರ ಸಪ್ತಾಹ ಕಾರ್ಯಕ್ರಮವದ ಅಧ್ಯಕ್ಷ ತೆ ವಹಿಸಿ ಮಾತನಾಡುತ್ತಾ “ಸಹಕಾರದಿಂದ ಸಮೃದ್ಧಿ” ಎಂಬ ಧೈಯ ದೊಂದಿಗೆ ವಿಶೇಷ ಸಹಕಾರಿ ಸಪ್ತಾಹ ದೇಶದಲ್ಲಿ ಪ್ರಥಮವಾಗಿ ಆಚರಿಸಲಾ ಗುತ್ತಿದೆ.ನಮ್ಮದು ಒಂದೇ ಪಕ್ಷ ಅದು ಸಹಕಾರ ಪಕ್ಷ.ರಾಜ್ಯದಲ್ಲಿ ೪೭ ಸಾವಿರಕ್ಕೂ ಅಧಿಕ ಸಹಕಾರಿ ಸಂಘಗಳು ದೇಶದಲ್ಲಿ ಮೂವತ್ತು ಕೋಟಿಗೂ ಅಧಿಕ ಮಂದಿ ಸಹಕಾರಿ ಸಂಘದ ಸದಸ್ಯರಿದ್ದಾರೆ.ಸಹಕಾರ ಸಂಘಗಳು ಜನಸಾಮಾನ್ಯರ ಬಳಿಗೆ ಬ್ಯಾಂಕ್ ಸೇವೆಯನ್ನು ನೀಡುತ್ತಿದೆ.ಅವರ ಜೊತೆ ಒಳ್ಳೆಯ ಒಡನಾಟವನ್ನು ಬೆಳೆಸಿಕೊಂಡು ಅವರ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಅವರಿಗೆ ನೆರವಾಗಿದೆ. ಇದರೊಂದಿಗೆ ಸಹಕಾರ ಸಂಘಗಳು ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಾ ಬಂದಿದೆ. ಸಹಕಾರ ತತ್ವದೊಂದಿಗೆ ಸಾಗುತ್ತಾ ಅಭಿವೃದ್ಧಿಯಾಗಿ ಜೊತೆಯಾಗಿ ಸಾಗೋಣ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಕರೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಸಹಕಾರ ಸಪ್ತಾಹದ ಧ್ವಜಾರೋಹಣ ನರವೇರಿಸಿದ ಶಾಸಕ ವೇದವ್ಯಾಸ್ ಡಿ. ಕಾಮತ್ ಮಾತನಾಡುತ್ತಾ ಭಾರತೀಯರ ಜೀವನ ಪದ್ಧತಿಯಲ್ಲಿ ಸಹಕಾರ ತತ್ವ ಇದೆ.ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಮಹತ್ವದ ಕೊಡುಗೆ ಇದೆ.ಪ್ರಧಾನ ಮಂತ್ರಿಗಳ ವಿಕಸಿತ ಭಾರತದ ಯಶಸ್ಸಿಗೆ ಸಹಕಾರ ಕ್ಷೇತ್ರದ ಬೆಳವಣಿಗೆಯ ಗುರಿ ಹೊಂದಿದೆ ಎಂದು ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು ಇದರ ಅಧ್ಯಕ್ಷ ರವಿರಾಜ್ ಹೆಗ್ಡೆ ಮಾತನಾ ಡುತ್ತಾಸಹಕಾರಿ ರಂಗ ಆಧುನಿಕ ತಂತ್ರ ವನ್ನು ಬಳಸಿಕೊಂಡು ಗ್ರಾಹಕರಿಗೆ ಉತ್ತಮ ಸೌಲಭ್ಯ ನೀಡುವಂತಾಗ ಬೇಕು ಎಂದು ಶುಭ ಹಾರೈಸಿದರು.ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಎನ್.ರಮೇಶ್ ಮಾತನಾಡುತ್ತಾಕೇಂದ್ರ ಸರಕಾರದ ಸಹಕಾರ ಸಚಿವಾಲಯ ೫ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭ ವಿವಿಧ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶೇಷ ಸಪ್ತಾಹ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.
ವಿಶ್ವ ಕರ್ಮ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಆಚಾರ್ಯ ಮಾತನಾ ಡುತ್ತಾ ಸಹಕಾರ ಕ್ಷೇತ್ರದಲ್ಲಿ ಜಾತಿ, ಧರ್ಮ,ಎಲ್ಲಾ ಜನರು ಸೇರಿ ಆಚರಿಸುವ ಕಾರ್ಯಕ್ರಮ ಸಹಕಾರಿ ಸಪ್ತಾಹ.ದ.ಕ ಜಿಲ್ಲಾ ಸಹಕಾರಿ ರಂಗದ ಪಿತಾ ಮಹ ಮೊಳಹಳ್ಳಿ ಶಿವರಾಯರ ಮೂಲಕ ಸಹಕಾರಿ ಕ್ಷೇತ್ರ ಹುಟ್ಟಿ ಬೆಳೆದು ದೇಶಾದ್ಯಂತ ವಿಸ್ತರಿಸಿದೆ. ಮೊಳಹಳ್ಳಿ ಶಿವರಾಯರು ಸಹಕಾರಿ ಕ್ಷೇತ್ರ ಎಲ್ಲಾ ಕ್ಷೇತ್ರದಲ್ಲೂ ಅಗತ್ಯವಿದೆ ಎಂದು ಸಹಕಾರ ಸಂಘ ಕಟ್ಟಿದರು. ಬಳಿಕ ಡಾ. ರಾಜೇಂದ್ರ ಕುಮಾರ್ ಸಹಕಾರಿ ರಂಗವನ್ನು ದೇಶದಲ್ಲಿಯೇ ಉನ್ನತ ಸ್ಥಾನಕ್ಕೆ ಏರುವಂತೆ ಮಾಡಿದ್ದಾರೆ ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು ಇದರ ನಿರ್ದೇಶಕ ಜಯಕರ ಶೆಟ್ಟಿ ಬಿ. ಇಂದ್ರಾಳಿ, ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಎನ್.ರಮೇಶ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ,ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು ಇದರ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಗೊಟ್ಟು,ದ.ಕ ಜಿಲ್ಲಾ ಸಹಕಾರಿ ಯೂನಿಯನ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ವಿ. ಹಿರೇಮಠ ವಂದಿಸಿದರು.
ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ದೇವಿ ಪ್ರಸಾದ್ ಶೆಟ್ಟಿಭಾಸ್ಕರ್ ಎಸ್. ಕೋಟ್ಯಾನ್, ಎಸ್.ಬಿ.ಜಯರಾಮ್ ರೈ, ಜೈರಾಜ್ ಬಿ.ರೈ, ಮೋನಪ್ಪ ಶೆಟ್ಟಿ ಎಕ್ಕಾರು,ವಾದಿರಾಜ ಶೆಟ್ಟಿ ಕೇಂದ್ರ ಸಹಕಾರಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.































