ಸಂಜೆವಾಣಿ ವಾರ್ತೆ
ಚಾಮರಾಜನಗರ, ಜೂ.13- ಪರಿಸರ ಮಾಲಿನ್ಯ ತಡೆಗಟ್ಟಲು ಹಾಗೂ ದೈಹಿಕವಾಗಿ ಚಟುವಟಿಕೆಯಿಂದ ಇರಲು ಬೈಸಿಕಲ್ ಸವಾರಿ ಅನುಕೂಲವಾಗಿದೆ ಎಂದು ಜಿಲ್ಲಾ ಪೆÇೀಲಿಸ್ ವರಿμÁ್ಠಧಿಕಾರಿ ಡಾ. ಬಿ.ಟಿ. ಕವಿತಾ ಅವರು ತಿಳಿಸಿದರು.
ಅವರು ಜಿಲ್ಲಾಡಳಿತ, ಜಿಲ್ಲಾ ಪೆÇಲೀಸ್, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಸುಸ್ಥಿರ ಭವಿಷ್ಯಕ್ಕಾಗಿ ಬೈಸಿಕಲ್ ಜಾಥಾ ಎಂಬ ಸದಾಶಯದೊಂದಿಗೆ ಆಯೋಜನೆಯಾಗಿದ್ದ ಬೈಸಿಕಲ್ ಜಾಥಾಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಖೇಲೋ ಇಂಡಿಯಾ ಯೋಜನೆಯ ಫಿಟ್ ಇಂಡಿಯಾ ಉಪಕ್ರಮದ ವಿಶ್ವ ಬೈಸಿಕಲ್ ದಿನವನ್ನು ಆಚರಿಸುವ ಸಲುವಾಗಿ ನಗರದಲ್ಲಿ ಬೈಸಿಕಲ್ ಜಾಥಾವನ್ನು ಏರ್ಪಡಿಸಲಾಗಿದೆ ಎಂದರು.
ಸ್ವಾಮಿ ವಿವೇಕಾನಂದರು ಹೇಳಿರುವ ರೀತಿಯಲ್ಲಿ ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಇರುತ್ತದೆ. ಹೀಗಾಗಿ ದೈಹಿಕವಾಗಿ ಆರೋಗ್ಯವಾಗಿದ್ದರೆ ಮಾನಸಿಕವಾಗಿ ಆರೋಗ್ಯವಾಗಿರಲು ಸಾಧ್ಯ ಎಂದು ತಿಳಿಸಿದರು.
ಈ ಹಿಂದೆ ಮಕ್ಕಳು ಮನೆಯಿಂದ ಹೊರ ಬಂದು ಆಟವಾಡುತ್ತಿದ್ದರು. ಆದರೆ ಇಂದು ಮಕ್ಕಳು ಟಿ.ವಿ. ಮೊಬೈಲ್ ಪ್ರಭಾವಕ್ಕೆ ಒಳಗಾಗಿ ಹೊರಗೆ ಆಟವಾಡುವುದು ಕಡಿಮೆಯಾಗುತ್ತಿದೆ. ಮನೆಯ ಒಳಗಿನ ಆಟಗಳಿಗೆ ಮಾತ್ರ ಆಸಕ್ತಿ ತೋರುತ್ತಿದ್ದಾರೆ. ಈ ಬೆಳವಣಿಗೆ ಆರೋಗ್ಯ ಕಾರಣದಿಂದ ಒಳ್ಳೆಯದಲ್ಲ ಎಂದರು.
ಇಂದಿನ ಸೈಕಲ್ ಜಾಥಾದಲ್ಲಿ ಮಕ್ಕಳು ಸಹ ಪಾಲ್ಗೊಂಡ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರು ಮಾತನಾಡಿ ಬೈಸಿಕಲ್ ಆರೋಗ್ಯದ ದೃಷ್ಠಿಯಿಂದ ಒಂದು ಒಳ್ಳೆಯ ಸಾಧನ. ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆರೋಗ್ಯಕ್ಕೆ, ಪರಿಸರಕ್ಕೆ ಪೂರಕವಾಗಿರುವುದು ಬೈಸಿಕಲ್ ಬಳಕೆ. ಇದರಿಂದ ವಾಯುಮಾಲಿನ್ಯ ತಡೆಗಟ್ಟಬಹುದು. ವೈಯುಕ್ತಿಕ ಆರೋಗ್ಯವನ್ನು ಉತ್ತಮ ಪಡಿಸಿಕೊಳ್ಳುವುದಕ್ಕೆ ಬೈಸಿಕಲ್ ಬಳಕೆಯಿಂದ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಶಶಿಧರ್, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಅವರು ಮಾತನಾಡಿದರು.
ಡಿವೈಎಸ್‍ಪಿ ಲಕ್ಷ್ಮಯ್ಯ, ಸೋಮಣ್ಣ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಇದ್ದರು.
ಬೈಸಿಕಲ್ ಜಾಥಾ ನಗರದ ಜಿಲ್ಲಾ ಸಶಸ್ತ್ರ ಪೆÇಲೀಸ್ ಕೇಂದ್ರ ಆವರಣದ ಬಳಿ ಚಾಲನೆಗೊಂಡಿತು. ತದನಂತರ ಜಿಲ್ಲಾ ಪೆÇಲೀಸ್ ಕವಾಯತು ಮೈದಾನದಲ್ಲಿ ಮುಕ್ತಾಯವಾಯಿತು. ಒಟ್ಟಾರೆ ಬೈಸಿಕಲ್ ಜಾಥಾವು ವಿಶೇಷ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು.