
ಸುಳ್ಯ:ದೈಹಿಕ ಶಿಕ್ಷಣ ಶಿಕ್ಷಕರಾಗಿ ೧೪ ವರ್ಷಗಳ ಕಾಲ ಸೇವೆ ಸಲ್ಲಿಸಿ ಪದೋನ್ನತಿ ಹೊಂದಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾಗಿ ಸೋಮವಾರ ಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ವರ್ಗಾವಣೆಗೊಂಡ ಸೂಫಿ ಪೆರಾಜೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಐವರ್ನಾಡು ಪಿಯು ಕಾಲೇನಿನಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ವಿಶ್ವನಾಥ ಕಟ್ಟತ್ತಾರು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲ ಮಹಮದ್ ಇಸಾಕ್ ಅಭಿನಂದನಾ ಭಾಷಣ ಮಾಡಿದರು. ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಕೌಕ್ರಾಡಿ, ನಿಕಟ ಪೂರ್ವ ಎಸ್.ಡಿ.ಎಂ.ಸಿ. ಅಧ್ಯಕ್ಷ ದಯಾನಂದ ಕಟ್ಟತ್ತಾರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ನಾರಾಯಣ ಬಿ., ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಲಕನಂದಿನಿ ಆಚಾರ್ಯ. ಕೆ ಉಪಸ್ಥಿತರಿದ್ದರು.
ಸಭೆಯಲ್ಲಿ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದರು.

































