Home ಜಿಲ್ಲೆ ಮಂಗಳೂರು ದ.ಕ. ಜಿಲ್ಲಾಡಳಿತದಿಂದ ನಾರಾಯಣ ಗುರು ಜಯಂತಿ ಆಚರಣೆ

ದ.ಕ. ಜಿಲ್ಲಾಡಳಿತದಿಂದ ನಾರಾಯಣ ಗುರು ಜಯಂತಿ ಆಚರಣೆ

ಮಂಗಳೂರು : ದ.ಕ.ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ನಗರದ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಉಮನಾಥ ಕೋಟ್ಯಾನ್ ಮಾತನಾಡಿ,ಬ್ರಹ್ಮಶ್ರೀ ನಾರಾಯಣ ಗುರುಗಳು ಲೋಕಸಂತ ಮಾತ್ರವಲ್ಲ, ವಿಶ್ವಕ್ಕೇ ಗುರುಗಳಾಗಿದ್ದಾರೆ. ಅವರು ಕೇವಲ ೨೬ ಪಂಗಡಗಳ ಗುರುಗಳಲ್ಲ.ಏಕತೆಯ ಮೂಲಕ ಸಮಾಜಕ್ಕೆ ಸ್ಪಷ್ಟ ಸಂದೇಶ ನೀಡಿದವರಲ್ಲಿ ಪ್ರಮುಖರಾಗಿದ್ದರು ಎಂದರು.
ಉಪನ್ಯಾಸಕ ದಯಾನಂದ ಕರ್ಕೇರ ಉಗ್ಗೆಲ್ಬೆಟ್ಟು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಸಂಸದ ಬ್ರಿಜೇಶ್ ಚೌಟ, ಕರಾವಳಿ ಅಭಿವೃದ್ಧಿ ಮಂಡಳಿಅಧ್ಯಕ್ಷ ಎಂ.ಎ. ಗಫೂರ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಶಾಲೆಟ್ ಪಿಂಟೊ, ಕರ್ನಾಟಕ ಗೇರುಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಮಾತನಾಡಿದರು. ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದರು. ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ದ.ಕ. ಜಿಲ್ಲಾ ಕಸಾಪ ಅಧ್ಯಕ್ಷಡಾ. ಎಂ.ಪಿ.ಶ್ರೀನಾಥ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಮಂಗಳೂರು ತಹಶೀಲ್ದಾರ್ರಮೇಶ್ ಬಾಬು, ಯೋಜನಾ ನಿರ್ದೇಶಕ ಜಯರಾಜ್ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ಕುಸುಮಾಕರ್ ಕುಂಪಲ ಕಾರ್ಯಕ್ರಮ ನಿರೂಪಿಸಿದರು.