ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವದ ಅಂಗವಾಗಿ ಸೋಮವಾರ ಪೂರ್ವಾಹ್ನ ಒಂಭತ್ತು ಗಂಟೆಯಿಂದ ತೋರಣಮುಹೂರ್ತ, ವಿಮಾನಶುದ್ಧಿ, ಷೋಡಶ ಕಲಶಾಭಿಷೇಕ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಅಪರಾಹ್ನ ನಾಲ್ಕು ಗಂಟೆಯಿಂದ ನಾಂದಿಮಂಗಲ ಕಾರ್ಯಕ್ರಮ ನಡೆಯಿತು. ಪೂಜ್ಯ ೧೦೫ ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಇಂದು ಪಾದಾಭಿಷೇಕ : ಮಂಗಳವಾರ ಬೆಳಿಗ್ಯೆ ಭವ್ಯ ೮.೩೦ ರಿಂದ ಬೀಡಿನಿಂದ ರತ್ನಗಿರಿಗೆ ಅಗ್ರೋದಕ ಮೆರವಣಿಗೆ ಬಳಿಕ ೨೧೬ ಕಲಶಗಳಿಂದ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ ನಡೆಯುತ್ತದೆ.
ಕಾರ್ಕಳ ಜೈನಮಠದ ಪೂಜ್ಯ ಲಲಿಕೀರ್ತಿಭಟ್ಟಾರಕರ ಸ್ವಾಮೀಜಿ ಮಂಗಲಪ್ರವಚನ ನೀಡುವರು.