Home ಜಿಲ್ಲೆ ಮಂಗಳೂರು ಧರ್ಮಸ್ಥಳ ಯೋಜನೆಯ ವಿರುದ್ಧ ಆರೋಪ ಪ್ರಕರಣ: ದೂರು ಆಧಾರ ರಹಿತ; ಪ್ರಾಥಮಿಕ ಹಂತದಲ್ಲೇ ವಜಾ

ಧರ್ಮಸ್ಥಳ ಯೋಜನೆಯ ವಿರುದ್ಧ ಆರೋಪ ಪ್ರಕರಣ: ದೂರು ಆಧಾರ ರಹಿತ; ಪ್ರಾಥಮಿಕ ಹಂತದಲ್ಲೇ ವಜಾ

*ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಅನೇಕ ಆರೋಪಗಳನ್ನು ಮಾಡಿ, ಖಾಸಗಿ ಕೇಸ್ ದಾಖಲಿಸಿದ್ದು, ಸುಪ್ರೀಂಕೋಟ್ ಈ ಅರ್ಜಿಯನ್ನು ಸೆ. ೮ರಂದು ತಳ್ಳಿ ಹಾಕಿದೆ. ೮ರಂದು ದೂರುದಾರರ ಈ ಅರ್ಜಿಯ ಕುರಿತಾಗಿ, ಭಾರತದ ಸರ್ವೋಚ್ಚ ನ್ಯಾಯಾಲಯವು ಸೆ. ಈ ಮನವಿಯನ್ನು ಆಲಿಸಿ, ಈ ದೂರು ಆಧಾರ ರಹಿತವಾಗಿರುವುದನ್ನು ಮನಗಂಡು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ.
ರಂಜನ್ ರಾವ್ ಮೊದಲು ಬೆಳ್ತಂಗಡಿಯ ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿದ್ದರು. ನ್ಯಾಯಾಲಯವು ಈ ಅರ್ಜಿಯನ್ನು ತಿರಸ್ಕರಿಸಿದಾಗ, ಪರಿಷ್ಕರಣೆಗಾಗಿ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ದೂರುದಾರರು ದಾವೆ ಹೂಡಿದರು. ನಂತರ ಈ ವಿಚಾರಕ್ಕೆ ಸಂಬಂಧಿಸಿದಂತೆ, ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಲಾಯಿತು. ಮಾನ್ಯ ಉಚ್ಚ ನ್ಯಾಯಾಲಯವು ಈ ಕೇಸನ್ನು ಕೂಲಂಕುಷವಾಗಿ ಪರಿಶೀಲಿಸಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ, ಬ್ಯಾಂಕುಗಳಿಂದ ಸಾಲ ಸೌಲಭ್ಯಗಳನ್ನು ದೊರಕಿಸಿಕೊಡುವುದು ಒಂದು ಆರ್ಥಿಕ ಸೇರ್ಪಡೆಯ ಅಂಗವಾಗಿ ಕೈಗೊಳ್ಳಲಾಗುತ್ತಿದೆ ಎನ್ನುವ ಸತ್ಯಾಂಶವನ್ನು ಯೋಜನೆಯ ಪರವಾಗಿ ರಾಜ್ಯದ ಹೆಸರಾಂತ ನ್ಯಾಯವಾದಿಗಳಾದ ಪಿ.ಪಿ.ಹೆಗ್ಡೆ ವಾದ ಮಂಡಿಸಿದ್ದರು. ಅಲ್ಲದೇ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಈ ಸಂಸ್ಥೆಯನ್ನು ಒಂದು ಚಾರಿಟೇಬಲ್ ಟ್ರಸ್ಟ್ ಆಗಿ ಮಾಡಿ, ಇದರ ಮೂಲಕ ಅನೇಕ ಸಮಾಜ ಸೇವೆಗಳನ್ನು ಕೈಗೊಳ್ಳುತ್ತಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯ ಈ ಸಮಾಜ ಸೇವಾ ಕಾರ್ಯಕ್ರಮಗಳ ಯಶಸ್ಸನ್ನು ಸಹಿಸದ ದೂರುದಾರರು
ಈ ದುರುದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡಿರುತ್ತಾರೆಂದು ವಾದಿಸಿದರು. ಧರ್ಮಸ್ಥಳ ಸಂಸ್ಥೆಗಳ ವಿರುದ್ಧ ನಿರಂತರವಾಗಿ ಸುಳ್ಳು ಆರೋಪಗಳನ್ನು ಮಾಡುವುದು ದೂರುದಾರರಿಗೆ ಹವ್ಯಾಸವಾಗಿದೆ ಎಂಬುದನ್ನು ಮಾನ್ಯ ಉಚ್ಚ ನ್ಯಾಯಾಲಯಕ್ಕೆ ತಿಳಿಸಲಾಯಿತು. . ಮಾನ್ಯ ಉಚ್ಚ ನ್ಯಾಯಾಲಯವು ಸತ್ಯಾಂಶಗಳನ್ನು ಗಮನಿಸಿ, ಗ್ರಾಮಾಭಿವೃದ್ಧಿ ಯೋಜನೆಯು ಹಾಕಿದ ಅರ್ಜಿಯನ್ನು ಪುರಸ್ಕರಿಸಿ, ಕೆಳ ನ್ಯಾಯಾಲಯದಲ್ಲಿ ನೀಡಿದ ಆದೇಶವನ್ನು ರದ್ದುಗೊಳಿಸಿದೆ. ಇದರಿಂದ ರಂಜನ್ ರಾವ್ ಯರ್ಡೂರು ಅವರಿಗೆ ತೀವ್ರ ಮುಖಭಂಗವಾಗಿದೆ. ಉಚ್ಚ ನ್ಯಾಯಾಲಯವು ನೀಡಿದ ತೀರ್ಪನ್ನು ಪ್ರಶ್ನಿಸಿ, ಏ. ೨೩ರಂದು ರಂಜನ್ ರಾವ್ ಸುಪ್ರಿಂ ಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಿದ್ದರು.
ಗ್ರಾಮಾಭಿವೃದ್ಧಿ ಯೋಜನೆಯ ಪರವಾಗಿ ನ್ಯಾಯವಾದಿ ಪಿ.ಪಿ. ಹೆಗ್ಡೆ ವಾದಿಸಿದ್ದರು. ಒಂದು ಶ್ರೇಷ್ಠ ಸೇವಾ ಸಂಸ್ಥೆಯ ವಿರುದ್ಧ ಮಾಡಿರುವ ಸುಳ್ಳು ಆರೋಪಗಳನ್ನು ಪ್ರಾಥಮಿಕ ಹಂತದಲ್ಲೇ ತಿರಸ್ಕರಿಸಿದ ದೇಶದ ಮಾನ್ಯ ಸರ್ವೋಚ್ಚ ನ್ಯಾಯಾಲಯವು ನೀಡಿದ ಈ ತೀರ್ಪು ಒಂದು ಐತಿಹಾಸಿಕ ತೀರ್ಪು ಆಗಿದೆ ಎಂದು ಯೋಜನೆಯ ಪ್ರಕಟಣೆ ತಿಳಿಸಿದೆ.