Home ಜಿಲ್ಲೆ ಮೈಸೂರು ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ: ಕೂರಗಲ್ಲು ಗ್ರಾಮಸ್ಥರ ಪ್ರತಿಭಟನೆ

ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ: ಕೂರಗಲ್ಲು ಗ್ರಾಮಸ್ಥರ ಪ್ರತಿಭಟನೆ

ಸಂಜೆವಾಣಿ ವಾರ್ತೆ
ಪಿರಿಯಾಪಟ್ಟಣ,ಜೂ.01:-
ತಾಲೂಕು ಕೂರಗಲ್ಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಗ್ರಾಮಸ್ಥರು, ಪೆÇೀಷಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.


ಪ್ರತಿಭಟನೆಯನ್ನು ಂIಏಏಒS ನ ಜಿಲ್ಲಾ ಅಧ್ಯಕ್ಷರು, ಹಾಗೂ ಮೈಸೂರು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಉಪಾಧ್ಯಕ್ಷರಾದ ಬಸವರಾಜು ಊ.ಒ. ಅವರು ಮಾತನಾಡಿ ಕೂರಗಲ್ಲು ಗ್ರಾಮದ ಶಾಲೆಯನ್ನು ಮುಚ್ಚಿ ನಾಲ್ಕು ಕಿಲೋಮೀಟರ್ ದೂರ ಇರುವ ಬೆಟ್ಟದಪುರದ ಏPS ಶಾಲೆಗೆ ವಿಲೀನಗೊಳಿಸಲು ಸರ್ಕಾರ ಆದೇಶಿಸಿದೆ. ಬಡಜನರ ಮಕ್ಕಳಿಗೆ ಶಿಕ್ಷಣವನ್ನು ಖಾತ್ರಿಪಡಿಸಬೇಕಿದ್ದ ಸರ್ಕಾರವೇ ಶಿಕ್ಷಣದ ವ್ಯಾಪಾರಕ್ಕೆ ನಿಂತಿದೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಹಳ್ಳಿಯ ಶಾಲೆಗಳನ್ನು ಮುಚ್ಚುತ್ತಿದೆ. ಕೆಪಿಎಸ್ ಶಾಲೆಗಳ ಮೇಲುಸ್ತುವಾರಿಯನ್ನು ಹೊರಗುತ್ತಿಗೆ ಕೊಡುವುದರ ಮೂಲಕ ಸಾರ್ವಜನಿಕ ಶಿಕ್ಷಣವನ್ನು ಕಂಪನಿಗಳಿಗೆ ಹಂತ-ಹಂತವಾಗಿ ಖಾಸಗಿ ಕಂಪನಿಗಳಿಗೆ ಧಾರೆಯೆರೆಯುವ ಹುನ್ನಾರ ಮಾಡಲಾಗಿದೆ. ಈಶ್ವರಚಂದ್ರ ವಿದ್ಯಾಸಾಗರ್, ಜ್ಯೋತಿಬಾಯಿಫುಲೆ. ಸಾವಿತ್ರಿಬಾಯಿಫುಲೆ, ಕುದ್ಮುಲ್ ರಂಗರಾವ್ ಮುಂತಾದವರ ಹೋರಾಟದಿಂದ ಇಂದು ನಮ್ಮ ನಾಡಿನ ಎಲ್ಲ ಮಕ್ಕಳಿಗೆ ಶಿಕ್ಷಣ ದೊರೆಯುತ್ತಿದೆ. ಈ ಮಹನೀಯರಿಗೆ ಅವಮಾನ ಮಾಡಿ ಸರ್ಕಾರವು ಶಾಲೆಗಳನ್ನು ಮುಚ್ಚುತ್ತಿದೆ. ಇಂತಹ ಶಾಲೆಗಳನ್ನು ಮುಚ್ಚುವುದು ಬಡಮಕ್ಕಳ ಭವಿಷ್ಯವನ್ನಷ್ಟೇ ಕತ್ತಲೆಗೆ ದೂಡಿದಂತೆ. ಅಲ್ಲದೇ ಸರ್ಕಾರದ ಈ ನೀತಿಯು ಕಡು ಜನವಿರೋಧಿಯಾಗಿದೆ’ ಎಂದು ವ್ಯಕ್ತಪಡಿಸಿದರು.ಮುಂದುವರೆದು, “ರಾಮನಗರ ಮತ್ತು ಅರಸೀಕೆರೆ ತಾಲೂಕುಗಳಲ್ಲಿ ಶಾಲೆ ಮುಚ್ಚಲು ಊರಿನ ಜನರಿಗೆ ಮೋಸ ಮಾಡಿ ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿಸಲಾಗಿದೆ. ಈ ಕುರಿತು ಗ್ರಾಮಸ್ಥರು ಎಚ್ಚರವಾಗಿರಬೇಕು. ಸರ್ಕಾರದ ಮೋಸಗಳಿಗೆ ಬಲಿಯಾಗದೇ ಊರಿನ ಶಾಲೆ ಉಳಿಸಲು ಹೋರಾಡಬೇಕು” ಎಂದು ಕರೆ ನೀಡಿದರು.


ಕೂರಗಲ್ಲು ಗ್ರಾಮದ ಹರೀಶ್ ಅವರು ಮಾತನಾಡಿ ‘ ನಮ್ಮೂರಿನ ಸರ್ಕಾರಿ ಶಾಲೆಗೆ ಶಿಕ್ಷಕರನ್ನು ನೇಮಕ ಮಾಡಲಿ, ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ನೀಡುವ ಸೌಲಭ್ಯಗಳನ್ನು ನಮ್ಮೂರಿನ ಶಾಲೆಗೆ ನೀಡಲಿ, ಆವಾಗ ಮಕ್ಕಳ ಸಂಖ್ಯೆ ಹೆಚ್ಚಾಗುತ್ತದೆ. ಸರ್ಕಾರಿ ಶಾಲೆಗಳನ್ನು ಮುಚ್ಚುವುದಾದರೆ ಸಚಿವರುಗಳು ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಲವಾರು ಹೋರಾಟಗಳ ಮೂಲಕ ನಮ್ಮ ಊರಿಗೆ ಶಾಲೆಯನ್ನು ಹಾಕಿಸಿಕೊಂಡಿದ್ದೇವೆ ಇದನ್ನು ಮುಚ್ಚಲು ನಾವು ಬಿಡುವುದಿಲ್ಲ. ಇದರ ವಿರುದ್ಧ ಗ್ರಾಮಸ್ಥರೆಲ್ಲರೂ ಒಟ್ಟಾಗಿ ಸೇರಿ ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದು ಹೇಳಿದರು.


ಪ್ರತಿಭಟನೆಯಲ್ಲಿ ಂIಆSಔ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಯಾದ ಪೂರ್ಣಿಮಾ, ಗ್ರಾಮಸ್ಥರಾದ ರವಿ ಕೆ ಟಿ, ರವೀಶ್ ಕೆ ಎಂ, ದೊಡ್ಡ ತಿಮ್ಮಯ್ಯ, ಹರೀಶ್, ಸಚಿನ್ ಹಾಗೂ ವಿದ್ಯಾರ್ಥಿಗಳು, ಗ್ರಾಮಸ್ಥರು ,ಪೆÇೀಷಕರು ಭಾಗವಹಿಸಿದ್ದರು.